ನಿವೃತ್ತ ಪೊಲೀಸ್ ಅಧಿಕಾರಿ ಎಸ್‌ ಕೆ ಉಮೇಶ್‌ ರೀಲ್‌ನಲ್ಲೂ ಪೊಲೀಸ್ ಇನ್ಸ್‌ಪೆಕ್ಟರ್‌ ಆಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ.

ಕನ್ನಡಪ್ರಭ ಸಿನಿವಾರ್ತೆ

ಹಿರಿಯ ಪೊಲೀಸ್ ಅಧಿಕಾರಿ, ಜನಪ್ರಿಯ ಲೇಖಕ, ನಟಿ ಸಪ್ತಮಿ ಗೌಡ ತಂದೆ ಎಸ್‌ ಕೆ ಉಮೇಶ್‌ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟಿದ್ದಾರೆ. ರಿಷಬ್‌ ಶೆಟ್ಟಿ ನಿರ್ಮಾಣದ ‘ಲಾಫಿಂಗ್‌ ಬುದ್ಧ’ ಸಿನಿಮಾದಲ್ಲಿ ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಮೋದ್‌ ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಲಾಫಿಂಗ್ ಬುದ್ಧ’ ಚಿತ್ರವನ್ನು ಎಂ ಭರತ್‌ರಾಜ್‌ ನಿರ್ದೇಶಿಸಿದ್ದಾರೆ.