ಸಾರಾಂಶ
ಶ್ರೀನಗರ ಕಿಟ್ಟಿ ಹಾಗೂ ರಚಿತಾ ರಾಮ್ ಜೋಡಿಯ ‘ಸಂಜು ವೆಡ್ಸ್ ಗೀತಾ 2’ ಚಿತ್ರ ಶೂಟಿಂಗ್ ಮುಕ್ತಾಯದ ಹಂತಕ್ಕೆ ಬಂದಿದೆ. ಚಿತ್ರತಂಡ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಹಾಡುಗಳ ಚಿತ್ರೀಕರಣ ಮಾಡಿಕೊಂಡು ಬಂದಿದ್ದು, ಈಗ ಹಾಡುಗಳ ಮೇಕಿಂಗ್ ವಿಡಿಯೋ ಬಿಡುಗಡೆ ಆಗಿದೆ.
ಕನ್ನಡಪ್ರಭ ಸಿನಿವಾರ್ತೆ
ಶ್ರೀನಗರ ಕಿಟ್ಟಿ ಹಾಗೂ ರಚಿತಾ ರಾಮ್ ಜೋಡಿಯ ‘ಸಂಜು ವೆಡ್ಸ್ ಗೀತಾ 2’ ಚಿತ್ರ ಶೂಟಿಂಗ್ ಮುಕ್ತಾಯದ ಹಂತಕ್ಕೆ ಬಂದಿದೆ. ಚಿತ್ರತಂಡ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಹಾಡುಗಳ ಚಿತ್ರೀಕರಣ ಮಾಡಿಕೊಂಡು ಬಂದಿದ್ದು, ಈಗ ಹಾಡುಗಳ ಮೇಕಿಂಗ್ ವಿಡಿಯೋ ಬಿಡುಗಡೆ ಆಗಿದೆ.ಈ ಸಂದರ್ಭದಲ್ಲಿ ನಿರ್ದೇಶಕ ನಾಗಶೇಖರ್, ‘ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಎರಡು ಹಾಡುಗಳ ಚಿತ್ರೀಕರಣ ಮಾಡಿದ್ದೇವೆ. ಮೊದಲ ಭಾಗಕ್ಕಿಂತ ಪಾರ್ಟ್ 2 ಸಿನಿಮಾ ತುಂಬಾ ಚೆನ್ನಾಗಿ ಬರಲಿದೆ’ ಎಂದರು.
ನಿರ್ಮಾಪಕ ಚಲವಾದಿ ಕುಮಾರ್, ‘ನಾಗಶೇಖರ್ ನನ್ನ ಇಂಜಿನಿಯರಿಂಗ್ ಕ್ಲಾಸ್‌ಮೇಟ್. ಅವರ ಮೇಲೆ ನನಗೆ ತುಂಬಾ ನಂಬಿಕೆ ಇದೆ. ಸಂಜು ವೆಡ್ಸ್ ಗೀತಾ 2 ಒಳ್ಳೆಯ ಸಿನಿಮಾ ಆಗಲಿದೆ’ ಎಂದರು.ರಚಿತಾ ರಾಮ್, ಶ್ರೀನಗರ ಕಿಟ್ಟಿ ಇದ್ದರು. ಶ್ರೀಧರ್ ವಿ ಸಂಭ್ರಮ್ ಸಂಗೀತ ಚಿತ್ರಕ್ಕಿದೆ. ಅತಿಥಿಗಳಾಗಿದ್ದ ಎಸ್ ಮಹೇಂದರ್, ಶರಣ್ ಚಿತ್ರತಂಡಕ್ಕೆ ಶುಭ ಕೋರಿದರು.