ಸಾರಾಂಶ
ಬರಗೂರರ ಸಪ್ನಮಂಟಪ ಕೃತಿ ಆಧರಿಸಿದ ಸಿನಿಮಾ ತೆರೆಗೆ ಬರುತ್ತಿದೆ.
ಸಿನಿವಾರ್ತೆ : ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ತಮ್ಮ ‘ಸ್ವಪ್ನಮಂಟಪ’ ಕಾದಂಬರಿಯನ್ನು ಅದೇ ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ. ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ಇಬ್ಬರೂ ದ್ವಿಪಾತ್ರದಲ್ಲಿ ನಾಯಕ ನಾಯಕಿಯಾಗಿ ನಟಿಸಿದ್ದಾರೆ.
ಪಾರಂಪರಿಕ ಸ್ಥಳಗಳ ರಕ್ಷಣೆಯನ್ನು ಪ್ರತಿಪಾದಿಸುವ ಕಥಾವಸ್ತುವಿನ ಈ ಸಿನಿಮಾದಲ್ಲಿ ಎರಡು ಕಾಲಘಟ್ಟಗಳಲ್ಲಿ ಕಥೆಯನ್ನು ನಿರೂಪಿಸಲಾಗಿದೆ. ಬಾಬುನಾಯ್ಕ್ ಈ ಸಿನಿಮಾ ನಿರ್ಮಿಸಿದ್ದಾರೆ. ಚಿತ್ರೀಕರಣ ಮುಗಿದಿದೆ.