ಸಾರಾಂಶ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಯೋಪಿಕ್ ಮತ್ತೊಮ್ಮೆ ತೆರೆ ಮೇಲೆ ಬರುತ್ತಿದೆ.
ಸಿನಿವಾರ್ತೆ
ತಮಿಳಿನಲ್ಲಿ ತಯಾರಾಗಲಿರುವ ಪಿಎಂ ನರೇಂದ್ರ ಮೋದಿ ಅವರ ಬಯೋಪಿಕ್ ‘ವಿಶ್ವ ನೇತಾ’ ಚಿತ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಚಿತ್ರದ ಕಟ್ಟಪ್ಪ ಖ್ಯಾತಿಯ ನಟ ಸತ್ಯರಾಜ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ತಮಿಳು ಚಿತ್ರರಂಗದಲ್ಲಿ ಈ ಕುರಿತು ಚರ್ಚೆಗಳು ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಈ ಹಿಂದೆ ಓಮಂಗ್ ಕುಮಾರ್ ನಿರ್ದೇಶನದ, ವಿವೇಕ್ ಒಬೆರಾಯ್ ನಟನೆಯ ‘ಪಿಎಂ ನರೇಂದ್ರ ಮೋದಿ’ ಚಿತ್ರ ಬಂದಿತ್ತು. ಈ ಚಿತ್ರದಲ್ಲಿ ನರೇಂದ್ರ ಮೋದಿ ಅವರ ಬಾಲ್ಯದಿಂದ ಹಿಡಿದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವವರೆಗಿನ ಕಥೆ ಇತ್ತು. ವಿಶ್ವ ನೇತಾ ಚಿತ್ರದ ಕತೆ ಏನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.