ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳಲು ಅಣಿಯಾಗುತ್ತಿದ್ದು, ಸಿನಿಮಾವೊಂದರಲ್ಲಿ ಮುಖ್ಯಮಂತ್ರಿ ಪಾತ್ರಕ್ಕೆ ಬಣ್ಣಹಚ್ಚಲಿದ್ದಾರೆ ಎಂದು ತಿಳಿದು ಬಂದಿದೆ.ಚಿತ್ರತಂಡವು ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಪಾತ್ರದಲ್ಲಿ ನಟಿಸುವಂತೆ ಮನವಿ ಮಾಡಿದೆ.

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳಲು ಅಣಿಯಾಗುತ್ತಿದ್ದು, ಸಿನಿಮಾವೊಂದರಲ್ಲಿ ಮುಖ್ಯಮಂತ್ರಿ ಪಾತ್ರಕ್ಕೆ ಬಣ್ಣಹಚ್ಚಲಿದ್ದಾರೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಪಾತ್ರದಲ್ಲಿ ನಟಿಸುವಂತೆ ಮನವಿ

ಚಿತ್ರತಂಡವು ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಪಾತ್ರದಲ್ಲಿ ನಟಿಸುವಂತೆ ಮನವಿ ಮಾಡಿದೆ. ಕಥೆ ಮತ್ತು ಪಾತ್ರದ ಬಗ್ಗೆ ಮಾಹಿತಿ ಪಡೆದ ಬಳಿಕ ಅವರು ಸಿನಿಮಾದಲ್ಲಿ ಕಾಣಿಸಿಕೊಳ್ಳಲು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.

ಇನ್ನೂ ಸಿನಿಮಾಗೆ ಹೆಸರು ಇಟ್ಟಿಲ್ಲ

ಇನ್ನೂ ಸಿನಿಮಾಗೆ ಹೆಸರು ಇಟ್ಟಿಲ್ಲ. ಉಳಿದಂತೆ ಸಿನಿಮಾದ ಕತೆ, ಸಿದ್ದರಾಮಯ್ಯ ಪಾತ್ರದ ಬಗ್ಗೆ ಹೆಚ್ಚಿನ ವಿವರಗಳು ಬಹಿರಂಗವಾಗಿಲ್ಲ. ನಿರ್ದೇಶಕ ರಾಜೇಶ್ ನಿರ್ದೇಶನದ ಈ ಸಿನಿಮಾವನ್ನು ಆರ್.ಎ.ಫಿಲ್ಮ್ ಫ್ಯಾಕ್ಟರಿ ಸಂಸ್ಥೆ ನಿರ್ಮಿಸುತ್ತಿದೆ. ಸಿನಿಮಾವನ್ನು ವಿಶೇಷ ರೀತಿಯಲ್ಲಿ ನಿರ್ಮಿಸಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ಐದು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು.