ಸಾರಾಂಶ
ನಿರ್ದೇಶಕ ಮಧುಸೂದನ್ ಹವಾಲ್ದಾರ್ ನಿರ್ಮಿಸಿರುವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಪುತ್ಥಳಿ ಬೆಂಗಳೂರಿನಲ್ಲಿ ಅನಾವರಣಗೊಂಡಿದೆ.
ಸಿನಿವಾರ್ತೆ
ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ನಿರ್ದೇಶಕ ಮಧುಸೂದನ್ ಹವಾಲ್ದಾರ್ ಈ ಪುತ್ಥಳಿ ನಿರ್ಮಿಸಿದ್ದಾರೆ. ಖ್ಯಾತ ವೈದ್ಯ ಡಾ ವೆಂಕಟರಮಣ ಈ ಪುತ್ಥಳಿ ಅನಾವರಣ ಮಾಡಿದರು. ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ನಿರ್ಮಾಪಕ ಲಹರಿ ವೇಲು, ಪಿ ಆರ್ ಓ ಸುಧೀಂದ್ರ ವೆಂಕಟೇಶ್, ಗಾಯಕ ವಿಷ್ಣು ಮುಖ್ಯ ಅತಿಥಿಗಳಾಗಿದ್ದರು.