ಸಾರಾಂಶ
ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಸುದೀಪ್ ಅಬ್ಬರ ಅವರ ಫ್ಯಾನ್ಸ್‌ಗಳಲ್ಲಿ ರೋಮಾಂಚನ ತಂದಿದೆ.
ಕನ್ನಡಪ್ರಭ ಸಿನಿವಾರ್ತೆ
ಕಿಚ್ಚ ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಮ್ಯಾಕ್ಸ್’ ಟೀಸರ್ ಬಿಡುಗಡೆಯಾಗಿದೆ. ಸುದೀಪ್ ಅವರ ಮಾಸ್ ಗಾಡ್ ಅವತಾರಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.ವಿಜಯ್ ಕಾರ್ತಿಕೇಯ ನಿರ್ದೇಶನದ ಈ ಆಕ್ಷನ್ ಥ್ರಿಲ್ಲರ್‌ನ ಬಿಡುಗಡೆ ದಿನಾಂಕ ಘೋಷಣೆಯ ನಿರೀಕ್ಷೆಯಲ್ಲಿದ್ದ ಕಿಚ್ಚನ ಅಭಿಮಾನಿಗಳಿಗೆ ಕೊಂಚ ನಿರಾಸೆಯಾಗಿದೆ. ಚಿತ್ರತಂಡ ರಿಲೀಸ್ ಡೇಟ್ ಘೋಷಣೆಯನ್ನು ಮುಂದೂಡಿದೆ. ಕಲೈಪುಲಿ ಎಸ್ ಧನು ಹಾಗೂ ಕಿಚ್ಚ ಸುದೀಪ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.