ಮ್ಯಾಕ್ಸ್‌ ಸಿನಿಮಾದ ಕ್ಲೈಮ್ಯಾಕ್ಸ್‌ಗೂ ಮೊದಲಿನ ಸುದೀಪ್‌ ಲುಕ್‌ ರಿವೀಲ್ ಆಗಿದೆ.

ಕನ್ನಡಪ್ರಭ ಸಿನಿವಾರ್ತೆ

ಸುದೀಪ್‌ ನಟನೆಯ ಬಹುನಿರೀಕ್ಷಿತ ಪ್ಯಾನ್‌ ಇಂಡಿಯಾ ಚಿತ್ರ ‘ಮ್ಯಾಕ್ಸ್‌’ ಕ್ಲೈಮ್ಯಾಕ್ಸ್‌ ಚಿತ್ರೀಕರಣದಲ್ಲಿ ಕಿಚ್ಚ ಸುದೀಪ್ ಪಾಲ್ಗೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ಕ್ಲೈಮ್ಯಾಕ್ಸ್ ಲುಕ್‌ನಲ್ಲಿ ಕಾಣಿಸಿಕೊಳ್ಳುವ ಮೊದಲಿನ ಫೋಟೋವನ್ನು ಹಂಚಿಕೊಂಡಿದ್ದಾರೆ.

ಮ್ಯಾಕ್ಸ್ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆ್ಯಕ್ಷನ್‌ ದೃಶ್ಯಗಳಿದ್ದು ಚೇತನ್‌ ಡಿಸೋಜಾ ಸಾಹಸ ನಿರ್ದೇಶನ ಮಾಡಿದ್ದಾರೆ. ವಿಜಯ ಕಾರ್ತಿಕೇಯನ್‌ ನಿರ್ದೇಶನದ ಈ ಸಿನಿಮಾದ ಶೂಟಿಂಗ್‌ ಅಂತಿಮ ಹಂತದಲ್ಲಿದೆ.

ಈ ಚಿತ್ರದಲ್ಲಿ ಸುದೀಪ್‌ ಪೊಲೀಸ್‌ ಆಫೀಸರ್‌ ಪಾತ್ರದಲ್ಲಿ ನಟಿಸುತ್ತಿದ್ದಾರೆ. ವರಲಕ್ಷ್ಮೀ ಶರತ್‌ ಕುಮಾರ್‌, ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ, ಅನಿರುದ್ಧ ಭಟ್‌ ನಟಿಸುತ್ತಿದ್ದಾರೆ. ಕಲೈಪುಲಿ ಎಸ್‌ ಧನು ನಿರ್ಮಿಸಿದ್ದಾರೆ. ಅಜನೀಶ್‌ ಲೋಕನಾಥ್‌ ಸಂಗೀತ ನಿರ್ದೇಶಕರು.