ಸಾರಾಂಶ
ಯಶ್ ನಟನೆಯ ‘ಟಾಕ್ಸಿಕ್’ ಸೆಟ್‌ನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಲೀಕ್ ಆಗಿದೆ. ಇದು ಶೂಟಿಂಗ್ ವೇಳೆಗಿನ ಫೋಟೋ ಹೌದಾ ಎಂಬ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ.
ಕನ್ನಡಪ್ರಭ ಸಿನಿವಾರ್ತೆ
ಯಶ್ ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಸೆಟ್‌ನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಲೀಕ್ ಆಗಿದೆ. ಇದು ಶೂಟಿಂಗ್ ವೇಳೆಗಿನ ಫೋಟೋ ಹೌದಾ ಎಂಬ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ.
ನಿರ್ದೇಶಕಿ ಗೀತು ಮೋಹನ್‌ದಾಸ್, ಯಶ್ ಹಾಗೂ ಸಿನಿಮಾ ತಂಡದವರು ಈ ಫೋಟೋದಲ್ಲಿ ಸೆರೆಯಾಗಿದ್ದಾರೆ. ಗೋವಾದಲ್ಲಿ ಸೆಟ್ ಹಾಕಿ ‘ಟಾಕ್ಸಿಕ್’ ಸಿನಿಮಾಕ್ಕೆ ಶೂಟಿಂಗ್ ನಡೆಯುತ್ತಿದೆ ಎನ್ನಲಾಗಿದೆ.
2025 ಏಪ್ರಿಲ್‌ನಲ್ಲಿ ಬಿಡುಗಡೆಯಾಗಲಿರುವ ಈ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ.