ಸಾರಾಂಶ
ಈ ವರ್ಷವೂ ನಟ ಯಶ್ ತಮ್ಮ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಜ.8ರಂದು ಯಶ್ ಅವರ ಹುಟ್ಟುಹಬ್ಬ. ‘ಟಾಕ್ಸಿಕ್’ ಸಿನಿಮಾ ಘೋಷಣೆಯಾದ ಹಿನ್ನೆಲೆಯಲ್ಲಿ ಅಭಿಮಾನಿಗಳು ಯಶ್ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಯೋಜಿಸಿದ್ದರು. ಆದರೆ ಯಶ್, ಅವತ್ತು ತಾನು ಹೊಸ ಸಿನಿಮಾದ ಕಾರ್ಯ ನಿಮಿತ್ತ ಊರಲ್ಲಿ ಇರುವುದಿಲ್ಲವಾದ್ದರಿಂದ ಅಭಿಮಾನಿಗಳನ್ನು ಭೇಟಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಕನ್ನಡಪ್ರಭ ಸಿನಿವಾರ್ತೆ
ಈ ವರ್ಷವೂ ನಟ ಯಶ್ ತಮ್ಮ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಜ.8ರಂದು ಯಶ್ ಅವರ ಹುಟ್ಟುಹಬ್ಬ. ‘ಟಾಕ್ಸಿಕ್’ ಸಿನಿಮಾ ಘೋಷಣೆಯಾದ ಹಿನ್ನೆಲೆಯಲ್ಲಿ ಅಭಿಮಾನಿಗಳು ಯಶ್ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಯೋಜಿಸಿದ್ದರು. ಆದರೆ ಯಶ್, ಅವತ್ತು ತಾನು ಹೊಸ ಸಿನಿಮಾದ ಕಾರ್ಯ ನಿಮಿತ್ತ ಊರಲ್ಲಿ ಇರುವುದಿಲ್ಲವಾದ್ದರಿಂದ ಅಭಿಮಾನಿಗಳನ್ನು ಭೇಟಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ, ‘ಜನವರಿ 8, ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನ ನನ್ನ ಜೊತೆ ಖುದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ. ನನಗೂ ಅಷ್ಟೇ, ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ. ಆದರೆ, ಸಿನಿಮಾದ ಕೆಲಸ ನನಗೆ ಬಿಡುವಿಲ್ಲದಂತೆ ಮಾಡಿದೆ. ಅನಿವಾರ್ಯವಾಗಿ ಪ್ರಯಾಣ ಮಾಡಲೇಬೇಕಿರುವುದರಿಂದ ಈ ಜನವರಿ 8 ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ. ನಿಮ್ಮಗಳ ಅಭಿಮಾನ ನನ್ನ ಅನುಪಸ್ಥಿತಿಯನ್ನ ಅರ್ಥ ಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು. ಸದಾಕಾಲ ನನ್ನ ಜೊತೆ ಇರುವ ನಿಮ್ಮ ಪ್ರೀತಿ, ಅಭಿಮಾನವೇ ನನಗೆ ಹುಟ್ಟುಹಬ್ಬದ ಉಡುಗೊರೆ’ ಎಂದು ಬರೆದಿದ್ದಾರೆ.