ಸಾರಾಂಶ
ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಮದುವೆಯಲ್ಲಿ ‘ರಾಕಿಂಗ್ ಸ್ಟಾರ್’ ಯಶ್ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಬೆಂಗಳೂರು : ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಮದುವೆಯಲ್ಲಿ ‘ರಾಕಿಂಗ್ ಸ್ಟಾರ್’ ಯಶ್ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ರಾಧಿಕಾ ಪಂಡಿತ್ ಕೂಡ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಯಶ್ ಅವರ ಹೊಸ ಲುಕ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕೆಜಿಎಫ್ ಸಿನಿಮಾ ಬಳಿಕ ಯಶ್ ಮೊದಲ ಬಾರಿಗೆ ಬೇರೆ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಟಾಕ್ಸಿಕ್’ ಸಿನಿಮಾಗಾಗಿ ಯಶ್ ಈ ಲುಕ್ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಅವರೊಂದಿಗೆ ಡಬ್ಲ್ಯುಡಬ್ಲ್ಯುಇ ಚಾಂಪಿಯನ್ ಜಾನ್ ಸೀನಾ ಕೂಡ ಇದ್ದರು. ಈ ಹಿನ್ನೆಲೆಯಲ್ಲಿ ಟಾಕ್ಸಿಕ್ ಸಿನಿಮಾದಲ್ಲಿ ಜಾನ್ ಸೀನಾ ನಟಿಸಲಿದ್ದಾರೆ ಎಂಬ ಸುದ್ದಿಯೂ ಹರಡಿದೆ.
ದೇಶದ ಅತ್ಯಂತ ದುಬಾರಿ ಮದುವೆ ಎನಿಸಿಕೊಂಡ ಬಿಲಿಯನೇರ್ ಉದ್ಯಮಿ ಮುಕೇಶ್ ಅಂಬಾನಿ ಮಗ ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ ವಿವಾಹ ಕಾರ್ಯಕ್ರಮದಲ್ಲಿ ಪ್ರಸ್ತುತ ಕರ್ನಾಟಕದಿಂದ ಯಶ್ ಕುಟುಂಬ ಮಾತ್ರ ಭಾಗವಹಿಸಿರುವ ಮಾಹಿತಿ ಬಂದಿದೆ.