ಸಾರಾಂಶ
ಬನಾರಸ್ ಸಿನಿಮಾದಲ್ಲಿ ಸಾಫ್ಟ್ ಬಾಯ್ ಆಗಿದ್ದ ಝೈದ್ ಝಾನ್ ಇದೀಗ ಕಲ್ಟ್ ಸಿನಿಮಾದಲ್ಲಿ ರಗಡ್ ಲುಕ್‌ನಲ್ಲಿ ಕಾಣಿಸಿದ್ದಾರೆ.
ಸಿನಿವಾರ್ತೆ
ಅನಿಲ್ ಕುಮಾರ್ ನಿರ್ದೇಶನ, ಝೈದ್ ಖಾನ್ ಅಭಿನಯದ ಹೊಸ ಚಿತ್ರ‘ಕಲ್ಟ್’ ಸಿನಿಮಾದ ಶೀರ್ಷಿಕೆ ಅನಾವರಣ ಹಾಗೂ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಗಿದೆ.
ಸಿನಿಮಾ ಬಗ್ಗೆ ನಿರ್ದೇಶಕ ಅನಿಲ್ ಕುಮಾರ್, ‘ಕಲ್ಟಿಸಂ ಎಂಬ ಶಬ್ದವನ್ನು ಈಗಿನ ಯುವಜನತೆ ಕಲ್ಟ್ ಎಂದು ಹೆಚ್ಚಾಗಿ ಸಂಬೋಧಿಸುತ್ತಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ಪದ ಹೆಚ್ಚು ಪ್ರಚಲಿತದಲ್ಲಿದೆ. ಚಿತ್ರ ಕೂಡ ಯುವಜನತೆಗೆ ಹತ್ತಿರವಾಗಲಿದೆ. ಹಾಗಾಗಿ ಚಿತ್ರಕ್ಕೆ ಕಲ್ಟ್ ಎಂಬ ಶೀರ್ಷಿಕೆ ಇಡಲಾಗಿದೆ. ಶೀರ್ಷಿಕೆ ಹಾಗೂ ಫಸ್ಟ್ ಲುಕ್‌ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಝೈದ್ ಖಾನ್ ಈ ಚಿತ್ರದಲ್ಲಿ ಮಾಸ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯದಲ್ಲೇ ಅದ್ದೂರಿ ಮುಹೂರ್ತದೊಂದಿಗೆ ಚಿತ್ರಕ್ಕೆ ಚಾಲನೆ ಸಿಗಲಿದೆ’ ಎಂದು ತಿಳಿಸಿದ್ದಾರೆ. ಆಶ್ರಿತ್ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ.