ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬದಲಿಗೆ ಮತ ಪತ್ರ (ಬ್ಯಾಲೆಟ್) ಬಳಸಲು ಅನುವಾಗುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ-2026ಕ್ಕೆ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಬಿಜೆಪಿ ಸದಸ್ಯರ ತೀವ್ರ ವಿರೋಧ, ಸಭಾತ್ಯಾಗದ ನಡುವೆಯೇ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬದಲಿಗೆ ಮತ ಪತ್ರ (ಬ್ಯಾಲೆಟ್) ಬಳಸಲು ಅನುವಾಗುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ-2026ಕ್ಕೆ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.ಕರ್ನಾಟಕದ ಬೆಂಗಳೂರಿಗೆ ಭಾರತದ ಸಿಲಿಕಾನ್ ವ್ಯಾಲಿ, ಐಟಿ ರಾಜಧಾನಿ ಎಂಬ ಹೆಸರಿದೆ. ಇಂಥ ರಾಜ್ಯದಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಇವಿಎಂ ಬದಲಿಗೆ ಬ್ಯಾಲೆಟ್ ಪೆಟ್ಟಿಗೆ ಬಳಸುವ ಮೂಲಕ ಶಿಲಾಯುಗಕ್ಕೆ ಕರೆದೊಯ್ಯುವ ವಿಧೇಯಕ ತಂದಿದ್ದಾರೆ. ಇದು ರಿಗ್ಗಿಂಗ್ ಹುನ್ನಾರ ಎಂದು ಬಿಜೆಪಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು.