ಸಾರಾಂಶ
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸರ್ಕಾರದ ನಡೆಗಳನ್ನು ಬೆಂಬಲಿಸುತ್ತಿದ್ದ ಕಾರಣಕ್ಕೆ ತಮಗೆ ಪಕ್ಷನಿಷ್ಠೆಯ ಪಾಠ ಹೇಳಿದ ಸ್ವಪಕ್ಷದ ನಾಯಕರಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್, ‘ರಾಜಕೀಯ ಪಕ್ಷಕ್ಕಿಂತ ರಾಷ್ಟ್ರೀಯ ಭದ್ರತೆಗೆ ಆದ್ಯತೆ ನೀಡಬೇಕು’ ಎಂದು ತಿರುಗೇಟು ನೀಡಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸರ್ಕಾರದ ನಡೆಗಳನ್ನು ಬೆಂಬಲಿಸುತ್ತಿದ್ದ ಕಾರಣಕ್ಕೆ ತಮಗೆ ಪಕ್ಷನಿಷ್ಠೆಯ ಪಾಠ ಹೇಳಿದ ಸ್ವಪಕ್ಷದ ನಾಯಕರಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್, ‘ರಾಜಕೀಯ ಪಕ್ಷಕ್ಕಿಂತ ರಾಷ್ಟ್ರೀಯ ಭದ್ರತೆಗೆ ಆದ್ಯತೆ ನೀಡಬೇಕು’ ಎಂದು ತಿರುಗೇಟು ನೀಡಿದ್ದಾರೆ.
ಕೇರಳದ ಕೊಚ್ಚಿಯಲ್ಲಿ ಏರ್ಪಡಿಸಲಾಗಿದ್ದ ಸಂವಾದದಲ್ಲಿ ತರೂರ್ ಮತ್ತು ಕಾಂಗ್ರೆಸ್ ನಡುವಿನ ಸಂಬಂಧದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ‘ಒಂದು ಪಕ್ಷದಲ್ಲಿ ಗುರುತಿಸಕೊಂಡಾಗಲೂ ನಮಗೆ ನಮ್ಮದೇ ಆದ ಕೆಲ ಮೌಲ್ಯಗಳು ಮತ್ತು ನಂಬಿಕೆಗಳು ಇರುತ್ತವೆ. ಆದರೆ ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ನಾವು ಇತರ ಪಕ್ಷಗಳೊಂದಿಗೆ ಸಹಕರಿಸಬೇಕು’ ಎಂದರು.ಇದೇ ವೇಳೆ ಕಾಂಗ್ರೆಸ್‌ಗೂ ಪರೋಕ್ಷವಾಗಿ ಬಿಸಿ ಮುಟ್ಟಿಸಿ, ‘ಕೆಲವೊಮ್ಮೆ ನಮ್ಮ ಪಕ್ಷನಿಷ್ಠಯನ್ನು ಪ್ರಶ್ನಿಸಲಾಗುತ್ತದೆ. ಆದರೆ ನನ್ನ ಪ್ರಕಾರ ದೇಶ ಮೊದಲು. ಪಕ್ಷಗಳಿರುವುದು ದೇಶವನ್ನು ಉತ್ತಮಗೊಳಿಸಲು. ನಾವು ಯಾವ ಪಕ್ಷದಲ್ಲಿದ್ದರೂ, ಗುರಿ ಮಾತ್ರ ಭಾರತದ ಉದ್ಧಾರವಾಗಿರಬೇಕು’ ಎಂದು ಹೇಳಿದ್ದಾರೆ.