ಸಾರಾಂಶ
ಲೋಕಸಭೆಯಲ್ಲಿ ಈ ಬಾರಿ 1.82 ಕೋಟಿ ನವ ಮತದಾರರು ಮತ ಚಲಾಯಿಸಲಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ 97 ಕೋಟಿ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಇದರಲ್ಲಿ ಮೊದಲ ಬಾರಿಗೆ ನೋಂದಣಿಯಾದ ಮತದಾರರ ಸಂಖ್ಯೆ 1.82 ಕೋಟಿ ಇದೆ. 97 ಕೋಟಿ ಮತದಾರರ ಪೈಕಿ 49.72 ಕೋಟಿ ಪುರುಷ ಮತದಾರರು ಮತ್ತು 47.1 ಕೋಟಿ ಮಹಿಳಾ ಮತದಾರರಿದ್ದಾರೆ.10.5 ಲಕ್ಷ ಮತಗಟ್ಟೆ, 55 ಲಕ್ಷ ಇವಿಎಂ7 ಹಂತದ ಮತದಾನಕ್ಕೆ 55 ಲಕ್ಷ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬಳಸಲಾಗುತ್ತದೆ. 10.5 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ 1.5 ಕೋಟಿ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ.