ಸಾರಾಂಶ
‘ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಗಲಭೆಯಲ್ಲಿ ಹಿಂದೂಗಳು ಹಾಗೂ ಇತರ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಭಾರತದ 140 ಕೋಟಿ ಜನರು ಕಳವಳಗೊಂಡಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನವದೆಹಲಿ : ‘ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಗಲಭೆಯಲ್ಲಿ ಹಿಂದೂಗಳು ಹಾಗೂ ಇತರ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಭಾರತದ 140 ಕೋಟಿ ಜನರು ಕಳವಳಗೊಂಡಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಲ್ಲದೆ, ಶೀಘ್ರದಲ್ಲೇ ಅಲ್ಲಿನ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಲಿದೆ ಎಂದು ಆಶಿಸಿದ್ದಾರೆ.
ತಮ್ಮ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಬಾಂಗ್ಲಾ ವಿಷಯ ಪ್ರಸ್ತಾಪಿಸಿದ ಅವರು, ‘ಭಾರತವು ಬಾಂಗ್ಲಾದೇಶದ ಅಭಿವೃದ್ಧಿಯ ಪ್ರಯಾಣಕ್ಕೆ ಯಾವತ್ತೂ ಶುಭ ಹಾರೈಸುತ್ತದೆ. ಶಾಂತಿಗೆ ನಾವು ಸದಾ ಬದ್ಧರಾಗಿದ್ದೇವೆ. ಬಾಂಗ್ಲಾದೇಶದಲ್ಲಿ ನಡೆದಿರುವುದನ್ನು ನೆರೆ ದೇಶದವನಾಗಿ ನಾನು ಅರ್ಥ ಮಾಡಿಕೊಳ್ಳಬಲ್ಲೆ. ಅಲ್ಲಿನ ಅಲ್ಪಸಂಖ್ಯಾತ ಸಮುದಾಯದ ಸುರಕ್ಷತೆಯ ಬಗ್ಗೆ 140 ಕೋಟಿ ಭಾರತೀಯರಿಗೆ ಕಳವಳವಿದೆ. ಭಾರತ ಯಾವತ್ತೂ ತನ್ನ ನೆರೆಯ ದೇಶ ಶಾಂತಿ ಮತ್ತು ಸಮೃದ್ಧಿಯ ಹಾದಿಯಲ್ಲಿ ಸಾಗಲಿ ಎಂದು ಬಯಸುತ್ತದೆ’ ಎಂದು ಹೇಳಿದರು.
ಬಾಂಗ್ಲಾದೇಶದ ಪ್ರಧಾನಿಯಾಗಿದ್ದ ಶೇಖ್ ಹಸೀನಾ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ ಬಳಿಕ ಆ ದೇಶದಲ್ಲಿ ಹಿಂದೂಗಳ ಮೇಲೆ ತೀವ್ರ ಹಿಂಸಾಚಾರ ಎಸಗಲಾಗುತ್ತಿದೆ.