ಸಾರಾಂಶ
ಶುಕ್ರವಾರ ದೇಶಾದ್ಯಂತ ಒಟ್ಟು 159 ಕೋವಿಡ್ ಪ್ರಕರಣ ದಾಖಲಾಗಿದ್ದು, ಕೇರಳದಲ್ಲಿ ಒಂದು ಸಾವು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ನವದೆಹಲಿ: ದೇಶದಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆ ಅವಧಿಯಲ್ಲಿ 159 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಕೇರಳದಲ್ಲಿ ಓರ್ವ ಸೋಂಕಿತ ಸಾವನ್ನಪ್ಪಿದ್ದಾನೆ. ಇನ್ನು ಗುಣಮುಖರ ಸಂಖ್ಯೆ ಹೆಚ್ಚಿರುವ ಕಾರಣ ಸಕ್ರಿಯ ಪ್ರಕರಣಗಳು 1623ಕ್ಕೆ ಇಳಿಕೆಯಾಗಿದೆ.
ದೇಶದಲ್ಲಿ ಈವರೆಗೆ 4.50 ಕೋಟಿ ಮಂದಿಗೆ ಸೋಂಕು ತಗುಲಿದ್ದು, ಅದರಲ್ಲಿ 4.44 ಕೋಟಿ ಮಂದಿ ಗುಣಮುಖರಾಗಿದ್ದಾರೆ ಹಾಗೂ 5.33 ಲಕ್ಷ ಜನ ಸಾವನ್ನಪ್ಪಿದ್ದಾರೆ.ಗುಣಮುಖರ ಪ್ರಮಾಣವು ಶೇ.98.81ರಷ್ಟು, ಮರಣದರವು ಶೇ.1.18ರಷ್ಟು ದಾಖಲಾಗಿದೆ.
220.67 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.