ಸಾರಾಂಶ
ಜಮ್ಮು-ಕಾಶ್ಮೀರದ ಕೇರನ್ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭಾರತಕ್ಕೆ ಅಕ್ರಮವಾಗಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾನುವಾರ ಭಾರತೀಯ ಸೇನಾ ಪಡೆ ಹತ್ಯೆ ಮಾಡಿದೆ.
ಶ್ರೀನಗರ: ಜಮ್ಮು-ಕಾಶ್ಮೀರದ ಕೇರನ್ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭಾರತಕ್ಕೆ ಅಕ್ರಮವಾಗಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾನುವಾರ ಭಾರತೀಯ ಸೇನಾ ಪಡೆ ಹತ್ಯೆ ಮಾಡಿದೆ.
ಟ್ವೀಟ್ ಮಾಡಿರುವ ಸೇನೆಯ ಚಿನಾರ್ ಕೋರ್ ಪಡೆ, ‘ಕೇರನ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದು, ಈ ಮೂವರು ಉಗ್ರರು ಅಕ್ರಮವಾಗಿ ಭಾರತದ ಗಡಿ ಒಳಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದರು. ಆದ್ದರಿಂದ ಅವರನ್ನು ಹತ್ಯೆ ಮಾಡಲಾಗಿದೆ’ ಎಂದು ಹೇಳಿದೆ.ಇತ್ತೀಚೆಗೆ ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ಹೆಚ್ಚುತ್ತಿದ್ದು, ಇದಕ್ಕೆ ಪಾಕಿಸ್ತಾನವು ಕಳಿಸುತ್ತಿರುವ ಉಗ್ರರೇ ಕಾರಣರಾಗಿದ್ದಾರೆ.