ಸಾರಾಂಶ
ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಿಂಧುದುರ್ಗ ಜಿಲ್ಲೆಯ ಕೋಟೆಯೊಂದರಲ್ಲಿ ಲೋಕಾರ್ಪಣೆಗೊಂಡಿದ್ದ ಮರಾಠಾ ರಾಜ ಛತ್ರಪತಿ ಶಿವಾಜಿ ಅವರ 35 ಅಡಿ ಎತ್ತರದ ಪ್ರತಿಮೆ ಸೋಮವಾರ ಕುಸಿದಿದೆ.
ಮುಂಬೈ (ಮಹಾರಾಷ್ಟ್ರ): ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಿಂಧುದುರ್ಗ ಜಿಲ್ಲೆಯ ಕೋಟೆಯೊಂದರಲ್ಲಿ ಲೋಕಾರ್ಪಣೆಗೊಂಡಿದ್ದ ಮರಾಠಾ ರಾಜ ಛತ್ರಪತಿ ಶಿವಾಜಿ ಅವರ 35 ಅಡಿ ಎತ್ತರದ ಪ್ರತಿಮೆ ಸೋಮವಾರ ಕುಸಿದಿದೆ.
ಮಾಲ್ವಾನ್‌ನ ರಾಜ್‌ಕೋಟ್ ಕೋಟೆಯಲ್ಲಿ ಸೋಮವಾರ ಮಧ್ಯಾಹ್ನ ಸುಮಾರು 1 ಗಂಟೆಗೆ 35 ಅಡಿ ಎತ್ತರದ ಶಿವಾಜಿ ಪ್ರತಿಮೆ ನೆಲಕ್ಕೆ ಉರುಳಿದೆ.
ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನದಿಂದ ಭಾರಿ ಮಳೆ, ಜೋರಾದ ಗಾಳಿ ಬೀಸುತ್ತಿದೆ. ಘಟನೆಗೆ ಇದು ಕಾರಣ ಎನ್ನಲಾಗಿದೆ. ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಘಟನೆಯ ಮಾಹಿತಿ ಪಡೆದಿದ್ದಾರೆ. ಈ ನಡುವೆ, ಪ್ರತಿಪಕ್ಷಗಳು ಕಳಪೆ ಕಾಮಗಾರಿ ಕಾರಣ ಕುಸಿದಿವೆ ಎಂದು ಆರೋಪಿಸಿದ್ದಾರೆ.
ಪ್ರಧಾನಿ ಮೋದಿ ಕಳೆದ ವರ್ಷ ಡಿ.4 ರಂದು ನೌಕಾಪಡೆಯ ದಿನದ ಪ್ರಯುಕ್ತ ಪ್ರತಿಮೆ ಅನಾವರಣಗೊಳಿಸಿದ್ದರು.