ನಮಾಜ್ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ 5 ಆರೋಪಿಗಳ ಬಂಧನ

| Published : Mar 19 2024, 12:48 AM IST / Updated: Mar 19 2024, 11:22 AM IST

ಸಾರಾಂಶ

ಗುಜರಾತ್ ವಿವಿ ಹಾಸ್ಟೆಲ್‌ನಲ್ಲಿ ನಮಾಜ್ ಮಾಡಿದ್ದಕ್ಕೆ ವಿದೇಶಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಅಹಮದಾಬಾದ್: ಗುಜರಾತ್ ವಿವಿ ಹಾಸ್ಟೆಲ್‌ನಲ್ಲಿ ನಮಾಜ್ ಮಾಡಿದ್ದಕ್ಕೆ ವಿದೇಶಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. 

ಈ ನಡುವೆ ಗೃಹ ಸಚಿವ ಹರ್ಷ ಸಾಂಘವಿ, ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಕಠಿಣ ಮತ್ತು ನ್ಯಾಯಾಂಗ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. 

20-25 ಜನರು ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಉಳಿದವರನ್ನು ಪತ್ತೆ ಹಚ್ಚಲು ಒಂಬತ್ತು ತಂಡ ರಚಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಜಿ.ಎಸ್. ಮಲಿಕ್ ತಿಳಿಸಿದ್ದಾರೆ. 

ಶನಿವಾರ ರಾತ್ರಿ ಗುಪೊಂದು ಹಾಸ್ಟೆಲ್ ಪ್ರವೇಶಿಸಿ ವಿದ್ಯಾರ್ಥಿಗಳ ನಮಾಜ್ ಮಾಡುವುದನ್ನು ವಿರೋಧಿಸಿ, ಮಸೀದಿಯಲ್ಲಿ ನಮಾಜ್ ಮಾಡುವಂತೆ ಹೇಳಿದೆ. ಈ ವಿಷಯಕ್ಕೆ ಜಗಳವಾಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಕೊಠಡಿ ಧ್ವಂಸಗೊಳಿಸಿದ್ದರು.