ಸಾರಾಂಶ
ಬಸ್ಸಿಗೆ ಓವರ್‌ಹೆಡ್ ಹೈವೋಲ್ಟೇಜ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದ್ದು, ಐದು ಮಂದಿ ಸಜೀವ ದಹನಗೊಂಡ ಘಟನೆ ಉತ್ತರಪ್ರದೇಶದ ಗಾಜಿಪುರದಲ್ಲಿ ನಡೆದಿದೆ.
ಗಾಜಿಪುರ: ಬಸ್ಸಿಗೆ ಓವರ್‌ಹೆಡ್ ಹೈವೋಲ್ಟೇಜ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದ್ದು, ಐದು ಮಂದಿ ಸಜೀವ ದಹನಗೊಂಡ ಘಟನೆ ಉತ್ತರಪ್ರದೇಶದ ಗಾಜಿಪುರದಲ್ಲಿ ನಡೆದಿದೆ.
ಈ ದುರ್ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಕುಟುಂಬವೊಂದು ಮುದುವೆ ಕಾರ್ಯಕ್ರಮಗಳನ್ನು ಮುಗಿಸಿ ದೇಗುಲಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ.ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀವಹಾನಿಗೆ ಸಂತಾಪ ಸೂಚಿಸಿ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಮೃತ ಕುಟುಂಬಕ್ಕೆ ತಲಾ 5 ಲಕ್ಷ ರು. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರು. ಆರ್ಥಿಕ ನೆರವು ನೀಡಲಾಗುವುದು ಎಂದು ತಮ್ಮ ಟ್ವೀಟರ್ ಖಾತೆಯಲ್ಲಿ ಫೋಸ್ಟ್ ಮಾಡಿದ್ದಾರೆ.