ಬೆಂಗಳೂರಿಗೆ ಬರುತ್ತಿದ್ದ ಕಾರು ಅಪಘಾತ: 7 ಮಂದಿ ದುರ್ಮರಣ

| Published : Oct 16 2023, 01:45 AM IST

ಸಾರಾಂಶ

ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 7 ಮಂದಿ ಮೃತಪಟ್ಟಿರುವ ಘಟನೆ ಬೆಂಗಳೂರು - ತಿರುವಣ್ಣಾಮಲೈ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.
ತಿರುವಣ್ಣಾಮಲೈ: ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 7 ಮಂದಿ ಮೃತಪಟ್ಟಿರುವ ಘಟನೆ ಬೆಂಗಳೂರು - ತಿರುವಣ್ಣಾಮಲೈ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಪ್ರಯಾಣದ ಸಮಯದಲ್ಲಿ ಕಾರು ವಿರುದ್ಧ ಪಥದಲ್ಲಿ ಚಲಿಸಿದ ಕಾರಣ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌, ಸಾವನ್ನಪ್ಪಿದ ಕುಟುಂಬಸ್ಥರಿಗೆ ತಲಾ 2 ಲಕ್ಷ ರು. ಹಾಗೂ ಗಾಯಗೊಂಡವರಿಗೆ 1 ಲಕ್ಷ ರು. ಪರಿಹಾರವನ್ನು ಘೋಷಿಸಿದ್ದಾರೆ.