ಸಾರಾಂಶ
ಕೋಲ್ಕತಾ ನಗರದ ಗಾರ್ಡನ್ ರೀಚ್ ಪ್ರದೇಶದಲ್ಲಿ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮಹಿಳೆಯರು ಸೇರಿ ಏಳು ಜನರು ಸಾವನ್ನಪ್ಪಿದ್ದಾರೆ.
ಕೋಲ್ಕತ್ತಾ: ನಗರದ ಗಾರ್ಡನ್ ರೀಚ್ ಪ್ರದೇಶದಲ್ಲಿ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮಹಿಳೆಯರು ಸೇರಿ ಏಳು ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 15 ಜನರು ಗಾಯಗೊಂಡಿದ್ದಾರೆ.
ಅಕ್ರಮವಾಗಿ ಕಟ್ಟಡ ನಿರ್ಮಿಸಲಾಗಿದ್ದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಕಟ್ಟಡದ ಎಂಡಿ ವಾಸಿಂರನ್ನು ಬಂಧಿಸಲಾಗಿದ್ದು, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಫಿರ್ಹಾದ್ ಹಕೀಮ್ ಹೇಳಿದರು.
ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಕಟ್ಟಡ ಕುಸಿತದ ಸ್ಥಳಕ್ಕೆ ಭೇಟಿ ನೀಡಿ ಪರೀಶಿಲಿಸಿದ್ದಾರೆ.