ಸಾರಾಂಶ
ಕೆಲ ಮುಸಲ್ಮಾನ ಯುವಕರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಲೈಂಗಿಕ ಶೋಷಣೆ ನಡೆಸಿ ಅವರ ಮತಾಂತರಕ್ಕೆ ಯತ್ನಿಸಿದ ಘಟನೆ ರಾಜಸ್ಥಾನದ ಬ್ಯಾವರ್ ಜಿಲ್ಲೆಯಲ್ಲಿ ನಡೆದಿದೆ.
ಜೈಪುರ: ಕೆಲ ಮುಸಲ್ಮಾನ ಯುವಕರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಲೈಂಗಿಕ ಶೋಷಣೆ ನಡೆಸಿ ಅವರ ಮತಾಂತರಕ್ಕೆ ಯತ್ನಿಸಿದ ಘಟನೆ ರಾಜಸ್ಥಾನದ ಬ್ಯಾವರ್ ಜಿಲ್ಲೆಯಲ್ಲಿ ನಡೆದಿದೆ.
ಈ ಕುರಿತು 5 ಹೆಣ್ಣುಮಕ್ಕಳ ಪರಿವಾರದವರು ನೀಡಿದ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಶೋಷಣೆ, ಅತ್ಯಾಚಾರ, ಹಿಂಬಾಲಿಸುವಿಕೆಗೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಬಿಜೈ ಪೊಲೀಸ್ ಠಾಣೆಯಲ್ಲಿ 3 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಜೊತೆಗೆ, ಬಾಲಕಿಯರ ಹೇಳಿಕೆಯನ್ನೂ ದಾಖಲಿಸಿಕೊಳ್ಳಲಾಗಿದೆ.
ಏನಿದು ಘಟನೆ?: ಆರೋಪಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಸಂತ್ರಸ್ತ ಬಾಲಕಿಯರನ್ನು ಸಂಪರ್ಕಿಸಿದ್ದರು. ಬಳಿಕ ತಮ್ಮೊಂದಿಗೆ ಮಾತನಾಡಲು ಅವರಿಗೆಲ್ಲಾ ಚೀನಾದ ಮೊಬೈಲ್‌ಗಳನ್ನು ನೀಡಿದ್ದರು. ಬಳಿಕ ಅವರನ್ನು ಲೈಂಗಿಕವಾಗಿ ಶೋಷಿಸಿದ್ದಲ್ಲದೆ, ಮತಾಂತರವಾಗುವಂತೆ ಒತ್ತಾಯಿಸಿ ಬೆದರಿಸಿದ್ದಾರೆ. ಈ ಕುರಿತು ಬಾಲಕಿಯರು ಮನೆಯಲ್ಲಿ ತಿಳಿಸಿದ್ದು, 10 ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈಗಾಗಲೇ 7 ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.