72 ಲಕ್ಷ ರು.ಮೌಲ್ಯದ ಕಾನ್ಸರ್‌ ಔಷಧ ಇನ್ನು ಕೇವಲ 3 ಲಕ್ಷಕ್ಕೆ

| Published : Mar 21 2024, 01:01 AM IST

ಸಾರಾಂಶ

ವಿವಿಧ ರೀತಿಯ ಕ್ಯಾನ್ಸರ್‌ ಚಿಕಿತ್ಸೆಗೆ ಪ್ರಮುಖವಾಗಿ ಬಳಸುವ ಓಲಾಪರಿಬ್‌ ಬೆಲೆಯನ್ನು ಭಾರೀ ಪ್ರಮಾಣದಲ್ಲಿ ಇಳಿಸಲಾಗಿದೆ.

ನವದೆಹಲಿ: ವಿವಿಧ ರೀತಿಯ ಕ್ಯಾನ್ಸರ್‌ ಚಿಕಿತ್ಸೆಗೆ ಪ್ರಮುಖವಾಗಿ ಬಳಸುವ ಓಲಾಪರಿಬ್‌ ಬೆಲೆಯನ್ನು ಭಾರೀ ಪ್ರಮಾಣದಲ್ಲಿ ಇಳಿಸಲಾಗಿದೆ. ಇದುವರೆಗೂ 72 ಲಕ್ಷ ರು.ತಗಲುತ್ತಿದ್ದ ಔಷಧಿ ಇನ್ನು ಕೇವಲ 3 ಲಕ್ಷ ರು.ಗಳಿಗೆ ಲಭ್ಯವಾಗಲಿದೆ ಎಂದು ಝೈಡಸ್‌ ಲೈಫ್‌ಸೈನ್ಸಸ್‌ ಔಷಧ ಕಂಪನಿ ಮಾಹಿತಿ ನೀಡಿದೆ.ಔಷಧ ತಯಾರಿಸಿದ್ದ ಮೂಲ ಕಂಪನಿಯ ಪೇಟೆಂಟ್‌ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಮೂಲ ಔಷದಧ ಜೆನೆರಿಕ್‌ ಮಾದರಿ ಬಿಡುಗಡೆ ಮಾಡಲಾಗಿದೆ ಎಂದು ಝೈಡಸ್‌ ಕಂಪನಿ ನೀಡಿದೆ.ಭಾರತದಲ್ಲಿ ಪ್ರತಿ ವರ್ಷ 14 ಲಕ್ಷ ಜನರಲ್ಲಿ ಕ್ಯಾನ್ಸರ್‌ ಪತ್ತೆಯಾಗುತ್ತದೆ. ಈ ಪೈಕಿ 2.75 ಲಕ್ಷ ಜನರು ಸ್ತನ, ಗರ್ಭಕೋಶ, ಮೇಜೋಜೀರಕ ಗ್ರಂಥಿಯ ಕ್ಯಾನ್ಸರ್‌ಗೆ ತುತ್ತಾಗುತ್ತಾರೆ. ಇದನ್ನು ಗುಣಪಡಿಸಲು ಓಲಾಪರಿಬ್‌ ಅನ್ನು ಬಳಸಲಾಗುತ್ತದೆ. ಒಂದು ವರ್ಷದ ಚಿಕಿತ್ಸೆಗೆ ಇದುವರೆಗೂ 75 ಲಕ್ಷ ರು.ಗಳನ್ನು ಔಷಧಕ್ಕಾಗಿ ವ್ಯಯಿಸಬೇಕಿತ್ತು. ಆದರೆ ಅದೇ ಔಷಧಿ ಇನ್ನು ಕೇವಲ 3 ಲಕ್ಷ ರು.ಗೆ ಸಿಗಲಿದೆ ಎಂದು ಕಂಪನಿ ಮಾಹಿತಿ ನೀಡಿದೆ.