ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ

| N/A | Published : May 19 2025, 04:58 AM IST

Gulzar House hyderabad fire
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
Share this Article
  • FB
  • TW
  • Linkdin
  • Email

ಸಾರಾಂಶ

ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಜವಳಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದರಿಂದಾಗಿ ಒಂದುವರೆ ವರ್ಷದ ಮಗು ಸೇರಿ 8 ಜನರು ದುರ್ಮರಣ ಹೊಂದಿದ್ದಾರೆ.

ಮುಂಬೈ: ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಜವಳಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದರಿಂದಾಗಿ ಒಂದುವರೆ ವರ್ಷದ ಮಗು ಸೇರಿ 8 ಜನರು ದುರ್ಮರಣ ಹೊಂದಿದ್ದಾರೆ. 

ಭಾನುವಾರ ಮಧ್ಯಾಹ್ನ ಸೊಲ್ಲಾಪುರದ ಅಕ್ಕಲಕೋಟೆ ರಸ್ತೆ ಬಳಿ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿದ್ದ ಕೇಂದ್ರ ಜವಳಿ ಮಿಲ್‌ನಲ್ಲಿ ದುರಂತ ಸಂಭವಿಸಿದೆ. 

ಮೇಲ್ನೋಟಕ್ಕೆ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವೇಳೆ ಕಾರ್ಖಾನೆಯ ಮಾಲೀಕ ಹಾಜಿ ಉಸ್ಮಾನ್‌, ಅವರ ಒಂದೂವರೆ ವರ್ಷದ ಮೊಮ್ಮಗ ಮತ್ತು ಕಾರ್ಮಿಕರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ತನಿಖೆ ಶುರುವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read more Articles on