ಪಕ್ಷ ತೊರೆದ ಆನಂದ್‌ ಮನೆ ಮುಂದೆ ಆಪ್‌ ಕಾರ್ಯಕರ್ತರ ಪ್ರತಿಭಟನೆ

| Published : Apr 13 2024, 01:07 AM IST / Updated: Apr 13 2024, 05:26 AM IST

ಪಕ್ಷ ತೊರೆದ ಆನಂದ್‌ ಮನೆ ಮುಂದೆ ಆಪ್‌ ಕಾರ್ಯಕರ್ತರ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ದೆಹಲಿ ಸಚಿವ ಸಂಪುಟಕ್ಕೂ ಹಾಗೂ ಆಮ್‌ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ರಾಜ್‌ಕುಮಾರ್‌ ಆನಂದ್‌ ನಿವಾಸದ ಮುಂದೆ ಶುಕ್ರವಾರ ಎಎಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನವದೆಹಲಿ: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನದ ಹಿನ್ನೆಲೆಯಲ್ಲಿ ಇತ್ತೀಚಿಗಷ್ಟೇ ದೆಹಲಿ ಸಚಿವ ಸಂಪುಟಕ್ಕೂ ಹಾಗೂ ಆಮ್‌ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ರಾಜ್‌ಕುಮಾರ್‌ ಆನಂದ್‌ ನಿವಾಸದ ಮುಂದೆ ಶುಕ್ರವಾರ ಎಎಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಇಲ್ಲಿನ ಪಟೇಲ್‌ ನಗರದಲ್ಲಿರುವ ಆನಂದ್‌ ಅವರ ಮನೆ ಮುಂದೆ ಎಎಪಿ ಕಾರ್ಯಕರ್ತರು ಧರಣಿ ನಡೆಸಿ, ಜಾರಿ ನಿರ್ದೇಶನಾಲಯದ (ಇ.ಡಿ.) ದಾಳಿಗೆ ಹೆದರಿ ಆನಂದ್ ಪಕ್ಷ ತೊರೆದಿದ್ದಾರೆ ಎಂದು ಆರೋಪಿಸಿದರು.

2020ರ ಚುನಾವಣೆಯಲ್ಲಿ ಪಟೇಲ್‌ ನಗರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಆನಂದ್‌, ಕ್ಷೇತ್ರದ ಜನತೆಗೆ ನೀಡಿದ್ದ ಭರವಸೆಯನ್ನು ಈಡೇರಿಸಿಲ್ಲ. ಇವರಿಂದ ಕ್ಷೇತ್ರಕ್ಕೆ ಯಾವುದೇ ಅಭಿವೃದ್ಧಿ ಯೋಜನೆಗಳು ಆಗಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆಪ್‌ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ಕೆಲವು ಗಂಟೆಗಳ ನಂತರ ಬಿಡುಗಡೆ ಮಾಡಿದ್ದಾರೆ.