ಸಾರಾಂಶ
ದೆಹಲಿ ಅಬಕಾರಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ಬಳಿಕ ಆಮ್ ಆದ್ಮಿ ಪಕ್ಷಕ್ಕೆ ಮತ್ತೊಂದು ತಲೆಬಿಸಿ ಎದುರಾಗಿದೆ.
ನವದೆಹಲಿ: ದೆಹಲಿ ಅಬಕಾರಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ಬಳಿಕ ಆಮ್ ಆದ್ಮಿ ಪಕ್ಷಕ್ಕೆ ಮತ್ತೊಂದು ತಲೆಬಿಸಿ ಎದುರಾಗಿದೆ. ವಂಚಕ ಸುಕೇಶ್ ಚಂದ್ರಶೇಖರ್ ಅವರಿಂದ ಸಚಿವ ಸತ್ಯೇಂದ್ರ ಜೈನ್ ಲಂಚ ಪಡೆದುಕೊಂಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ.
ಹೀಗಾಗಿ ಈಗಾಗಲೇ 4 ವರ್ಷದಿಂದ ಜೈಲಿನಲ್ಲಿರುವ ಸತ್ಯೇಂದ್ರ ಜೈನ್ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಈ ಹಿಂದೆ ತಿಹಾರ್ ಜೈಲಿನಲ್ಲಿ ವಂಚಕ ಸುಕೇಶ್ ಚಂದ್ರಶೇಖರ್ ಅವರಿಂದ ಸಚಿವ ಸತ್ಯೇಂದ್ರ ಜೈನ್ ಅವರು 10 ಕೋಟಿ ರು. ಲಂಚ ಪಡೆದಿದ್ದನ್ನು ಸಿಬಿಐ ತನಿಖೆ ನಡೆಸಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ.ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 2017ರಲ್ಲೇ ಜೈನ್ ಅವರನ್ನು ಸಿಬಿಐ ಬಂಧಿಸಿತ್ತು.