ಗುರುವಾರ ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಸಿಲುಕಿದ ಲಂಡನ್‌ನ ಪ್ರಜೆಗಳಿಬ್ಬರು ಭಾರತ ಬಿಟ್ಟು ಹೊರಡುವ ಮುಂಚೆ ಮಾಡಿದ ವಿಡಿಯೋ ಲಭ್ಯವಾಗಿದೆ.

-ವಿಮಾನದಲ್ಲಿದ್ದ ಲಂಡನ್ ಪ್ರಜೆಗಳಿಂದ ವಿಡಿಯೋ

ಅಹಮದಾಬಾದ್: ಗುರುವಾರ ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಸಿಲುಕಿದ ಲಂಡನ್‌ನ ಪ್ರಜೆಗಳಿಬ್ಬರು ಭಾರತ ಬಿಟ್ಟು ಹೊರಡುವ ಮುಂಚೆ ಮಾಡಿದ ವಿಡಿಯೋ ಲಭ್ಯವಾಗಿದೆ.

ಲಂಡನ್ ಮೂಲದ ಯೋಗಾಭ್ಯಾಸಿ ಜೇಮಿ ಮೀಕ್ ಮತ್ತು ಅವರ ಸ್ನೇಹಿತ ಫಿಯೊಂಗಲ್ ಗ್ರೀನ್‌ಲಾ ಗುಜರಾತ್ ಭೇಟಿ ಮುಗಿಸಿ ಲಂಡನ್‌ಗೆ ತೆರಳುವ ಮುಂಚೆ ವಿಡಿಯೋ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದರು. ‘ಇದು ಭಾರತದಲ್ಲಿ ನಮ್ಮ ಕೊನೆಯ ರಾತ್ರಿ. ಭಾರತದಲ್ಲಿ ನಮಗೆ ನಿಜವಾಗಿಯೂ ಮಾಂತ್ರಿಕ ಅನುಭವವಾಯಿತು. ಮನಸ್ಸಿಗೆ ಮುದ ನೀಡುವ ಅನೇಕ ಕ್ಷಣಗಳು ಘಟಿಸಿದವು. ಇವನ್ನೆಲ್ಲ ವ್ಲಾಗ್‌ನಲ್ಲಿ ಹಂಚಿಕೊಳ್ಳುತ್ತೇವೆ’ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಆದರೆ ದುರದೃಷ್ಟವೆಂಬಂತೆ ಅದು ಅವರ ಜೀವನದ ಕೊನೆಯ ದಿನವಾಗಿಯೂ ಹೊರಹೊಮ್ಮಿದೆ.