ಜ್ಞಾನವಾಪಿ ಪೂಜೆ ವಿರುದ್ಧ ಸುಪ್ರೀಂಗೆ ಮಸೀದಿ ಸಮಿತಿ ಮೇಲ್ಮನವಿ

| Published : Feb 27 2024, 01:32 AM IST

ಜ್ಞಾನವಾಪಿ ಪೂಜೆ ವಿರುದ್ಧ ಸುಪ್ರೀಂಗೆ ಮಸೀದಿ ಸಮಿತಿ ಮೇಲ್ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ತಮ್ಮ ಅರ್ಜಿಯನ್ನು ವಜಾ ಮಾಡಿದ ಹಿನ್ನೆಲೆಯಲ್ಲಿ ಗ್ಯಾನವಾಪಿ ಮಸೀದಿಯ ನೆಲಮಹಡಿ ವಿಚಾರಕ್ಕೆ ಸಂಬಂಧಿಸಿದಂತೆ ಅಂಜುಮ್‌ ಇನ್ತೆಜಾಮಿಯಾ ಸಮಿತಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

ನವದೆಹಲಿ: ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿನ ಹಿಂದೂ ದೇವರ ವಿಗ್ರಹಗಳಿಗೆ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ಮಾಡಿಕೊಟ್ಟ ವಾರಾಣಸಿ ಜಿಲ್ಲಾ ಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಅಲಹಾಬಾದ್‌ ಹೈಕೋರ್ಟ್‌ ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜ್ಞಾನವಾಪಿ ಅಂಜುಮ್‌ ಇಂತೆಜಾಮಿಯಾ ಸಮಿತಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಸೋಮವಾರ ಬೆಳಗ್ಗೆ 11 ಗಂಟೆಗೆ ಹೈಕೋರ್ಟು, ಮಸೀದಿ ಮನವಿಯನ್ನು ತಿರಸ್ಕರಿಸಿ ತೀರ್ಪು ಪ್ರಕಟಿಸಿತ್ತು. ಇದಕ್ಕೂ ಮೊದಲು ಸುಪ್ರೀಂ ಕೋರ್ಟ್‌, ಹೈಕೋರ್ಟ್‌ಗೆ ಹೋಗುವಂತೆ ಮಸೀದಿ ಸಮಿತಿಗೆ ಸೂಚಿಸಿತ್ತು.