ಸಿಎಎ ಜಾರಿಗೆ ತಡೆ ಕೋರಿ ಸುಪ್ರೀಂಗೆ ಒವೈಸಿ ಅರ್ಜಿ

| Published : Mar 17 2024, 01:51 AM IST / Updated: Mar 17 2024, 12:03 PM IST

ಸಿಎಎ ಜಾರಿಗೆ ತಡೆ ಕೋರಿ ಸುಪ್ರೀಂಗೆ ಒವೈಸಿ ಅರ್ಜಿ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತಡೆ ಕೋರಿ ಎಂಐಎಂ ಮುಖಂಡ ಅಸಾದುದ್ದೀನ್‌ ಒವೈಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಧಾರ್ಮಿಕ ದೌರ್ಜನ್ಯಕ್ಕೊಳಗಾಗಿ ಬಂದಿರುವವರಿಗೆ ಪೌರತ್ವ ಕೊಡುವ ಸಲುವಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತಡೆ ಕೋರಿ ಎಂಐಎಂ ಮುಖಂಡ ಅಸಾದುದ್ದೀನ್‌ ಒವೈಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಈ ಕುರಿತು ಸಲ್ಲಿಸಿರುವ ಅರ್ಜಿಯಲ್ಲಿ, ‘ಸಿಎಎ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಇರುವ ಎಲ್ಲ ಅರ್ಜಿ ಇತ್ಯರ್ಥವಾಗುವವರೆಗೂ ಕಾನೂನು ಜಾರಿಗೆ ತಡೆ ನೀಡಬೇಕು. ಹಾಗೂ ಈಗಾಗಲೇ ಜಾರಿ ಮಾಡಿರುವ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನೂ ಸ್ಥಗಿತ ಮಾಡಲು ಸೂಚಿಸಬೇಕು’ ಎಂದು ಅರ್ಜಿ ಸಲ್ಲಿಸಿದ್ದಾರೆ.