ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಸೋಮವಾರ ತಮಿಳುನಾಡು, ಕೇರಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಭಾನುವಾರ ಹೇಳಿದೆ. ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಅಂದಾಜಿಸಿದೆ.

ಚೆನ್ನೈ: ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಸೋಮವಾರ ತಮಿಳುನಾಡು, ಕೇರಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಭಾನುವಾರ ಹೇಳಿದೆ.

ತಮಿಳುನಾಡಿನ ಘಟ್ಟ ಪ್ರದೇಶಗಳಾದ ಕೊಯಮತ್ತೂರು, ನೀಲಗಿರಿ, ಈರೋಡ್, ತಿರುಪ್ಪೂರ್, ತೇಣಿ, ತೆಂಕಶಿ, ಕೇರಳ ಪ್ರದೇಶಗಳಲ್ಲೂ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಅಂದಾಜಿಸಿದೆ.

ಆದರೆ ಚೆನ್ನೈ ಮತ್ತು ಅದರ ಸುತ್ತಮುತ್ತ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಈಶಾನ್ಯ ಮುಂಗಾರು ಆರಂಭವಾದಾಗಿನಿಂದ ತಮಿಳುನಾಡು 2-3 ದಿನಗಳಲ್ಲಿ ಭಾರಿ ಮಳೆ ಪಡೆದಿದೆ.