ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಸಂಘಟನೆ (ಎಐಎಸ್‌ಎ) ಮತ್ತು ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ) ಶನಿವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದೆ.
ವಿದ್ಯಾರ್ಥಿ ಪ್ರತಿಭಟನೆ ವೇಳೆ 150ಕ್ಕೂ ಹೆಚ್ಚು ಜನರು ವಶಕ್ಕೆ
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಸಂಘಟನೆ (ಎಐಎಸ್‌ಎ) ಮತ್ತು ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ) ಶನಿವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದೆ. ಇದು ಶುಕ್ರವಾರದ ಪ್ರತಿಭಟನೆಯ ಮುಂದುವರಿಕೆಯಾಗಿತ್ತು. ರ್‍ಯಾಲಿ ನಡೆಸಿದ ಎಐಎಸ್‌ಎ ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ಸೇರಿ ಸುಮಾರು 150 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಎಐಎಸ್‌ಎ ಪಟೇಲ್ ಚೌಕ್‌ನಿಂದ ಜಂತರ್ ಮಂತರ್ ವರೆಗೆ ಪ್ರತಿಭಟನಾ ಮೆರವಣಿಗೆ ಹೊರಟಿತ್ತು. ಇದರಲ್ಲಿ ಹಿರಿಯ ವಕೀಲರಾದ ಕಪಿಲ್ ಸಿಬಲ್, ನಿತ್ಯಾ ರಾಮಕೃಷ್ಣನ್, ಪಲ್ಲವ್ ಸಿಸೋಡಿಯಾ, ಪ್ರಶಾಂತ್ ಭೂಷಣ್ ಕೂಡ ಭಾಗವಹಿಸಿದ್ದರು. ಈ ವೇಳೆ ನಿಯೋಜನೆಯಾಗಿದ್ದ ಪೊಲೀಸರು, ಪ್ರತಿಭಟನಾ ಸ್ಥಳಕ್ಕೆ ತಲುಪಿದವರನ್ನೆಲ್ಲಾ ವಶಕ್ಕೆ ಪಡೆದಿದ್ದಾರೆ. ಈ ವೇಳೆ ದಿಲ್ಲಿ ಪೊಲೀಸರು ನೇಹಾ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಸಂಘಟನೆ ಆರೋಪಿಸಿದೆ.
ಅತ್ತ ಎನ್‌ಎಸ್‌ಯುಐ ಇಂಡಿಯಾ ಗೇಟ್ ಬಳಿ ಸೇರಿ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ಮತದಾನದ ಹಕ್ಕುಗಳ ರಕ್ಷಣೆ ಕೋರಿದ್ದಾರೆ. ಜತೆಗೆ ಸಿಇಸಿ ರಾಜೀನಾಮೆಗೆ ಆಗ್ರಹಿಸಿದರು.