ಸಾರಾಂಶ
ಮಧ್ಯಪ್ರದೇಶದ ಸಂಸದ ಅಜಯ್ ಸಿಂಗ್ ಬಿಜೆಪಿಗೆ ರಾಜೀನಾಮೆ ನೀಡಿದ್ದು ಪಕ್ಷದ ಕುರಿತು ಕಟುವಾಗಿ ಟೀಕಿಸಿದ್ದಾರೆ
ಭೋಪಾಲ್: ಮಧ್ಯಪ್ರದೇಶದ ಬಿಜೆಪಿ ರಾಜ್ಯಸಭಾ ಸದಸ್ಯ ಅಜಯ್ ಪ್ರತಾಪ್ ಸಿಂಗ್ ಶನಿವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಬಿಜೆಪಿ ನಾಯಕರು ದೊಡ್ಡ ಪ್ರಮಾಣದ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದ್ದಾರೆ. ಸಿಂಗ್ ಸಿಧಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದರು ಹಾಗೂ ಟಿಕೆಟ್ ಕೈತಪ್ಪಿತ್ತು.
ಬಿಜೆಪಿಯಲ್ಲಿ ಭ್ರಷ್ಟರಿಗೆ ರಕ್ಷಣೆ ಸಿಗುತ್ತಿದ್ದು, ಪಕ್ಷವು ರಾಜಕೀಯ ವರ್ತಕರ ‘ಅಡ್ಡಾ’ ಆಗಿ ಮಾರ್ಪಟ್ಟಿದೆ ಎಂದು ಕಿಡಿಕಾರಿದ್ದಾರೆ.
ಇತ್ತೀಚೆಗೆ ಇಬ್ಬರು ಬಿಜೆಪಿ ಲೋಕಸಭಾ ಸದಸ್ಯರು ಕೂಡ ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿದ್ದರು.