ಸಾರಾಂಶ
ತಮ್ಮ ತಾಯಿ ಸುಧಾಮೂರ್ತಿ ಭಾರತದಲ್ಲಿ ರಾಜ್ಯಸಭಾ ಸದಸ್ಯರಾಗಿ ನೆಮಕವಾಗಿರುವುದಕ್ಕೆ ಪುತ್ರಿ ಅಕ್ಷತಾ ಮೂರ್ತಿ ಬ್ರಿಟನ್‌ನಲ್ಲಿ ನಡೆದ ಮಹಿಳಾ ದಿನಾಚರಣೆಯಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.
ಲಂಡನ್: ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಡಾ। ಸುಧಾ ಮೂರ್ತಿ ಅವರು ರಾಜ್ಯಸಭೆ ಸದಸ್ಯತ್ವ ಪಡೆದಿದ್ದಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಪತ್ನಿ ಹಾಗೂ ಸುಧಾ ಅವರ ಪುತ್ರಿ ಅಕ್ಷತಾ ಮೂರ್ತಿ ಹರ್ಷ ವ್ಯಕ್ತಪಡಿಸಿದ್ದಾರೆ. ಸುಧಾ ಅವರು ಮಹಿಳೆಯರಿಗೆ ಮಾದರಿಯಾಗಿದ್ದಾರೆ ಎಂದು ಅಕ್ಷತಾ ಹೆಮ್ಮೆಯ ಮಾತುಗಳನ್ನಾಡಿದ್ದಾರೆ.
ಡೌನಿಂಗ್ ಸ್ಟ್ರೀಟ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅಕ್ಷತಾ ಮೂರ್ತಿ, ಅಂತಾರಾಷ್ಟ್ರೀಯ ಮಹಿಳಾ ದಿನದಂದು ತಮ್ಮ ತಾಯಿ ರಾಜ್ಯಸಭೆಗೆ ನಾಮಾಂಕಿತ ಆಗಿದರುವುದು ತುಂಬ ಸಂತಸದ ವಿಷಯ. ಸಾಧನೆಯ ಹಾದಿಯಲ್ಲಿರುವ ಮಹಿಳೆಯರಿಗೆ ಸುಧಾಮೂರ್ತಿ ಅವರು ಮಾದರಿಯಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.