ಸಾರಾಂಶ
ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಏ.5ರಂದು ದೂರದರ್ಶನವು ಕೇರಳ ಸ್ಟೋರಿ ಚಲನಚಿತ್ರ ಪ್ರದರ್ಶನಕ್ಕೆ ಮುಂದಾಗಿರುವುದಕ್ಕೆ ಕಾಂಗ್ರೆಸ್ ಮತ್ತು ಸಿಪಿಎಂ ಆಕ್ಷೇಪ ವ್ಯಕ್ತಪಡಿಸಿವೆ.
ತಿರುವನಂತಪುರ: ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಏ.5ರಂದು ದೂರದರ್ಶನವು ಕೇರಳ ಸ್ಟೋರಿ ಚಲನಚಿತ್ರ ಪ್ರದರ್ಶನಕ್ಕೆ ಮುಂದಾಗಿರುವುದಕ್ಕೆ ಕಾಂಗ್ರೆಸ್ ಮತ್ತು ಸಿಪಿಎಂ ಆಕ್ಷೇಪ ವ್ಯಕ್ತಪಡಿಸಿವೆ.
ಅಲ್ಲದೆ ಅವು ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡಿವೆ. ಬಿಜೆಪಿಯು ಚುನಾವಣಾ ಭವಿಷ್ಯವನ್ನು ಹೆಚ್ಚಿಸಿಕೊಳ್ಳಲು ಧರ್ಮದ ಆಧಾರದ ಮೇಲೆ ಸಮಾಜ ವಿಭಜಿಸುವ ಪ್ರಯತ್ನ ಮಾಡುತ್ತಿದೆ ಎಂದು ಅವು ಆರೋಪಿಸಿವೆ.
ಕೇರಳದ 32,000 ಮಹಿಳೆಯರನ್ನು ಇಸ್ಲಾಂಗೆ ಮತಾಂತರ ಮಾಡಿದ ಅಂಶಗಳನ್ನು ಒಳಗೊಂಡಿರುವ ಚಿತ್ರ ಕಳೆದ ವರ್ಷ ಬಿಡುಗಡೆಯಾಗಿ ದೇಶವ್ಯಾಪಿ ಭಾರೀ ಸುದ್ದಿಯಾಗಿತ್ತು.