ಜಮ್ಮ ಮತ್ತು ಕಾಶ್ಮೀರದಲ್ಲಿನ ಸಶಸ್ತ್ರ ಪಡೆಗಳ ವಿಶೇಷ ಆಧಿಕಾರವನ್ನು (ಆಫ್‌ಸ್ಪಾ) ಹಿಂತೆಗೆದುಕೊಳ್ಳಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ನವದೆಹಲಿ: ಜಮ್ಮ ಮತ್ತು ಕಾಶ್ಮೀರದಲ್ಲಿನ ಸಶಸ್ತ್ರ ಪಡೆಗಳ ವಿಶೇಷ ಆಧಿಕಾರವನ್ನು (ಆಫ್‌ಸ್ಪಾ) ಹಿಂತೆಗೆದುಕೊಳ್ಳಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಕೇಂದ್ರಾಡಳಿತ ಪ್ರದೇಶದಲ್ಲಿನ ಸೈನ್ಯವನ್ನು ಹಿಂತೆಗೆದುಕೊಳ್ಳಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಜಮ್ಮು ಮತ್ತು ಕಾಶ್ಮೀರದ ಸ್ಥಳೀಯ ಪೊಲೀಸರಿಗೆ ಉಸ್ತುವಾರಿ ವಹಿಸಲು ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.

ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆ ಚುನಾವಣೆಯನ್ನು ಸೆಪ್ಟೆಂಬರ್‌ನಲ್ಲಿ ನಡೆಸುವಂತೆ ಸುಪ್ರಿಂ ಕೋರ್ಟ್‌ ಆದೇಶಿಸಿದೆ ಎಂದರು.

ಇತ್ತೀಚಿಗಷ್ಟೇ ಅಸ್ಸಾಂನ ಕಾರ್ಯಕ್ರಮವೊಂದರಲ್ಲಿ ಈಶಾನ್ಯ ಭಾಗಗಳಲ್ಲಿ ಆಫ್‌ಸ್ಪಾ ರದ್ದುಗೊಳಿಸಲಾಗುವುದು ಎಂದು ಅಮಿತ್‌ ಶಾ ತಿಳಿಸಿದ್ದರು.