ತಿರುಪತಿ ವೆಂಕಟೇಶ್ವರ ದೇಗುಲದಲ್ಲಿ ಅಮಿತ್‌ ಶಾ ಪ್ರಾರ್ಥನೆ

| Published : Jun 01 2024, 12:46 AM IST / Updated: Jun 01 2024, 05:24 AM IST

Amith Shah
ತಿರುಪತಿ ವೆಂಕಟೇಶ್ವರ ದೇಗುಲದಲ್ಲಿ ಅಮಿತ್‌ ಶಾ ಪ್ರಾರ್ಥನೆ
Share this Article
  • FB
  • TW
  • Linkdin
  • Email

ಸಾರಾಂಶ

ಅತ್ತ ಪ್ರಧಾನಿ ನರೇಂದ್ರ ಮೋದಿ ಅವರು ಕನ್ಯಾಕುಮಾರಿಯಲ್ಲಿ ಧ್ಯಾನದಲ್ಲಿ ತೊಡಗಿದ್ದರೆ, ಇತ್ತ ತಿರುಮಲ ವೆಂಕಟೇಶ್ವರ ದೇಗುಲದಲ್ಲಿ ಮೋದಿ ಪರಮಾಪ್ತನಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಪ್ರಾರ್ಥನೆ ಸಲ್ಲಿಸಿದರು.

ತಿರುಪತಿ: ಅತ್ತ ಪ್ರಧಾನಿ ನರೇಂದ್ರ ಮೋದಿ ಅವರು ಕನ್ಯಾಕುಮಾರಿಯಲ್ಲಿ ಧ್ಯಾನದಲ್ಲಿ ತೊಡಗಿದ್ದರೆ, ಇತ್ತ ತಿರುಮಲ ವೆಂಕಟೇಶ್ವರ ದೇಗುಲದಲ್ಲಿ ಮೋದಿ ಪರಮಾಪ್ತನಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಪ್ರಾರ್ಥನೆ ಸಲ್ಲಿಸಿದರು.

ಬೆಳಗ್ಗೆ 8 ಗಂಟೆ ಸುಮಾರಿನಲ್ಲಿ ಪತ್ನಿ ಸೋನಾಲ್ ಶಾ ಅವರೊಂದಿಗೆ ದೇವಾಲಯಕ್ಕೆ ಭೇಟಿ ನೀಡಿದ ಅವರು ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಂಡಿದ್ದರು. ಶಾ ಅವರನ್ನು ಆಶೀರ್ವದಿಸಿದ ದೇಗುಲದ ಅರ್ಚಕರು ಅವರಿಗೆ ಡೈರಿ, ಆಯುರ್ವೇದ ಉತ್ಪನ್ನಗಳು, ಲಡ್ಡು ಪ್ರಸಾದ ಸೇರಿದಂತೆ ಇತರ ವಸ್ತುಗಳನ್ನು ಉಡುಗೊರೆಯಾಗಿ ನೀಡಿ ಗೌರವಿಸಿದರು ಎಂದು ಟಿಟಿಡಿ ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ತಮಿಳುನಾಡಿನ ಪುದುಕೊಟ್ಟೈನಲ್ಲಿರುವ ಕೊಟ್ಟೈ ಭೈರವ ದೇವಾಲಯದಲ್ಲಿ ಗೃಹಸಚಿವರು ಪ್ರಾರ್ಥನೆ ಸಲ್ಲಿಸಿದ್ದರು.