ಸಾರಾಂಶ
ಪ್ರಧಾನಿ ಮೋದಿ ಮೂರನೇ ಅವಧಿಯಲ್ಲಿ 400ಕ್ಕೂ ಹೆಚ್ಚು ಸೀಟು ಗೆದ್ದು ಸರ್ಕಾರ ರಚಿಸಲು ಎಲ್ಲ ಬಿಜೆಪಿ ಕಾರ್ಯಕರ್ತರು ಪಣತೊಡಬೇಕು ಎಂಬುದಾಗಿ ಅಮಿತ್ ಶಾ ತಿಳಿಸಿದ್ದಾರೆ.
ಖಜುರಾಹೋ: 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಕೊಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ 3ನೇ ಅವಧಿಗೆ ಅವಕಾಶ ಮಾಡಿಕೊಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ.
ಪಕ್ಷದ ಬೂತ್ ಕಾರ್ಯಕರ್ತರ ಜೊತೆ ಮಾತನಾಡಿದ ಅವರು,‘ನರೇಂದ್ರ ಮೋದಿ ಅವರಿಗೆ ಮೂರನೇ ಅವಧಿಗೆ 400ಕ್ಕೂ ಅಧಿಕ ಸೀಟುಗಳನ್ನುಕೊಡಿಸಲು ಸಂಕಲ್ಪ ಮಾಡಿ. ಮೋದಿ ಅವರಿಗೆ ನೀಡುವ ಮತ ಭಾರತವನ್ನು ಮೂರನೇ ಅತಿ ದೊಡ್ಡ ಆರ್ಥಿಕತೆಯನ್ನಾಗಿ ಮಾಡುತ್ತದೆ’ ಎಂದರು.ಜೊತೆಗೆ ಕಾಂಗ್ರೆಸ್ ವಿರುದ್ಧ ಪ್ರಹಾರ ನಡೆಸಿದ ಅವರು,‘ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಕಾಂಗ್ರೆಸ್. ಕಾಂಗ್ರೆಸ್‌ನ 10 ವರ್ಷದ ಸರ್ಕಾರದ ಅವಧಿಯಲ್ಲಿ 12 ಲಕ್ಷ ಕೋಟಿ ರು. ಅಕ್ರಮ ನಡೆದಿದೆ’ ಎಂದು ವಾಗ್ದಾಳಿ ನಡೆಸಿದರು.