ಸಾರಾಂಶ
ಮೈತೇಯಿ-ಕುಕಿ ನಡುವೆ ಕೇಂದ್ರ ಸರ್ಕಾರ ಸೇತುವೆಯಾಗಲಿದೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ನವದೆಹಲಿ: ಜನಾಂಗೀಯ ಗಲಭೆಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದ್ದು, ಶಾಂತಿ ಕದಡುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ.
ಕಳೆದೊಂದು ವರ್ಷದಿಂದ ಸಂಘರ್ಷಕ್ಕೆ ಮೂಲ ಕಾರಣವಾಗಿರುವ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ತಲೆದೋರಿರುವ ಬಿಕ್ಕಟ್ಟು ನಿವಾರಣೆಗೆ ಕೇಂದ್ರ ಸರ್ಕಾರ ಸೇತುವೆಯಾಗಲಿದೆ. ಎರಡೂ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಶೀಘ್ರದಲ್ಲಿ ಕಂಡುಕೊಳ್ಳುವುದಾಗಿ ಅಮಿತ್ ಶಾ ತಿಳಿಸಿದ್ದಾರೆ.
ಕಳೆದ 1 ವರ್ಷದಿಂದ ನಡೆಯುತ್ತಿರುವ ಹಿಂಸೆಯಲ್ಲಿ ಮಣಿಪುರದಲ್ಲಿ ನೂರಾರು ಜನ ಸಾವಿಗೀಡಾಗಿದ್ದಾರೆ.