ಕಲ್ಲು ಎಸೆವವರು, ಉಗ್ರರ ಕುಟುಂಬಕ್ಕೆ ಸರ್ಕಾರಿ ನೌಕರಿ ಇಲ್ಲ: ಅಮಿತ್‌ ಶಾ

| Published : May 28 2024, 01:04 AM IST / Updated: May 28 2024, 05:11 AM IST

ಕಲ್ಲು ಎಸೆವವರು, ಉಗ್ರರ ಕುಟುಂಬಕ್ಕೆ ಸರ್ಕಾರಿ ನೌಕರಿ ಇಲ್ಲ: ಅಮಿತ್‌ ಶಾ
Share this Article
  • FB
  • TW
  • Linkdin
  • Email

ಸಾರಾಂಶ

ಜಮ್ಮು ಕಾಶ್ಮೀರದಲ್ಲಿ ಕಲ್ಲು ಎಸೆಯುವವರು ಮತ್ತು ಉಗ್ರ ಕೃತ್ಯಗಳಲ್ಲಿ ಭಾಗಿಯಾಗುವವರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ ಸಿಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ‘ಭಯೋತ್ಪಾದನೆ ಮತ್ತು ಕಲ್ಲು ತೂರಾಟದಂತಹ ಪ್ರಕರಣಗಳಲ್ಲಿ ಭಾಗಿಯಾಗುವವರ ಕುಟುಂಬಕ್ಕೆ ಜಮ್ಮು ಕಾಶ್ಮೀರದಲ್ಲಿ ಸರ್ಕಾರಿ ಉದ್ಯೋಗ ಸಿಗುವುದಿಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ.

ಪಿಟಿಐ ಸಂದರ್ಶನದಲ್ಲಿ ಮಾತನಾಡಿದ ಅಮಿತ್ ಶಾ, ‘ಕಾಶ್ಮೀರದಲ್ಲಿ ನಾವು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದೇವೆ.

ಅದರನ್ವಯ ಉಗ್ರ ಸಂಘಟನೆಗೆ ಸೇರಿದವರ ಕುಟುಂಬ ಸದಸ್ಯರಿಗೆ ಮತ್ತು ಕಲ್ಲು ತೂರಾಟದಂತಹ ಘಟನೆಯಲ್ಲಿ ಭಾಗಿಯಾದವರ ಕುಟುಂಬದ ಯಾರಿಗೂ ಸರ್ಕಾರಿ ಉದ್ಯೋಗ ಸಿಗಲ್ಲ.

ಒಂದು ವೇಳೆ ಯಾರಾದರೂ ಮುಂದೆ ಬಂದು ತಮ್ಮ ಕುಟುಂಬದ ಆಪ್ತರು ಭಯೋತ್ಪಾದನೆ ಸಂಘಟನೆಗೆ ಸೇರಿದ್ದಾರೆ ಎಂದು ಹೇಳಿದರೆ ಅಂತಹ ಕುಟುಂಬಗಳಿಗೆ ವಿನಾಯತಿ ನೀಡುತ್ತೇವೆ’ ಎಂದು ಅಮಿತ್ ಶಾ ಹೇಳಿದ್ದಾರೆ.