ಸಾರಾಂಶ
ಪ್ರಾಣಿಗಳ ರಕ್ಷಣೆಗಾಗಿ ರಿಲಯನ್ಸ್ ಪುನರ್ವಸತಿ ಕೇಂದ್ರ ಸ್ಥಾಪನೆ ಮಾಡಲಾಗಿದೆ ಎಂದು ಅನಂತ್ ಅಂಬಾನಿ ತಿಳಿಸಿದ್ದಾರೆ.
ಜಾಮ್‌ನಗರ: ಭಾರತ ಹಾಗೂ ವಿದೇಶಗಳಲ್ಲಿ ಗಾಯಗೊಂಡ, ಸಮಸ್ಯೆಗೆ ಈಡಾದ ಪ್ರಾಣಿಗಳ ರಕ್ಷಣೆ, ಆರೈಕೆ ಮತ್ತು ಚಿಕಿತ್ಸೆಗಾಗಿ ರಿಲಯನ್ಸ್ ಇಂಡಸ್ಟ್ರೀಸ್ ವಂತಾರ (ಸ್ಟಾರ್ ಆಫ್ ದ ಫಾರೆಸ್ಟ್) ಎಂಬ ಕಾರ್ಯಕ್ರಮವನ್ನು ಘೋಷಿಸಲಾಗಿದೆ.
ಇದಕ್ಕಾಗಿ ಗುಜರಾತ್ ನ ಜಾಮ್ ನಗರದಲ್ಲಿನ ರಿಲಯನ್ಸ್ ರಿಫೈನರಿ ಕೇಂದ್ರದಲ್ಲಿ 3000 ಎಕರೆಗಳ ಪುನರ್ವಸತಿ ಕೇಂದ್ರ ಸ್ಥಾಪಿಸಲಾಗಿದೆ.ಈ ರೀತಿಯ ಕಾರ್ಯಕ್ರಮ ಜಗತ್ತಿನಲ್ಲೇ ಮೊದಲ ಬಾರಿಯಾಗಿದ್ದು, ಪರಿಣತರ ಜೊತೆಗೂಡಿ ಅರಣ್ಯದ ವಾತಾವರಣವನ್ನು ನಿರ್ಮಾಣ ಮಾಡಲಾಗಿದೆ.
ಚಿಕ್ಕ ವಯಸ್ಸಿನಲ್ಲಿ ಶುರುವಾದ ಈ ಪ್ರೀತಿ ಈಗ ಸಾಕಾರಗೊಂಡಿದೆ.ಈ ಕೇಂದ್ರದಲ್ಲಿ ಒಟ್ಟಾರೆ ಒಂದು ಲಕ್ಷ ಚದರಡಿಯ ಆಸ್ಪತ್ರೆ, ವೈದ್ಯಕೀಯ ಸಂಶೋಧನಾ ಕೇಂದ್ರ ಇದ್ದು, ಎರಡು ಸಾವಿರದ ನೂರಕ್ಕೂ ಹೆಚ್ಚು ಸಿಬ್ಬಂದಿ ಇದ್ದಾರೆ ಎಂದು ರಿಲಯನ್ಸ್ ನಿರ್ದೇಶಕ ಅನಂತ್ ಅಂಬಾನಿ ಹೇಳಿದ್ದಾರೆ.