ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರಾವಧಿಯಲ್ಲಿ ಬಾತ್‌ರೂಮ್ ಸ್ವಚ್ಛಮಾಡುವ ರಾಸಾಯನಿಕಗಳನ್ನು ಬಳಸಿ ಸಿದ್ಧಪಡಿಸಿದ್ದ ತುಪ್ಪದಿಂದ ತಿರುಪತಿ ಲಡ್ಡು ತಯಾರಿಸಲಾಗುತ್ತಿತ್ತು ಎಂದು ಆಂಧ್ರ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ.
ಬಾತ್‌ರೂಮಲ್ಲಿ ಬಳಸುವ ಕೆಮಿಕಲ್ ಇದ್ದ ತುಪ್ಪದಿಂದ ತಿರುಪತಿ ಲಡ್ಡು ತಯಾರಿಕೆ!- ಆಂಧ್ರ ಮುಖ್ಯಮಂತ್ರಿ ನಾಯ್ಡು ಗಂಭೀರ ಆರೋಪ
- ವೈಎಸ್‌ಆರ್‌ಸಿಪಿ ಸರ್ಕಾರ ವಿರುದ್ಧ ತೀವ್ರ ಆಕ್ರೋಶಪಿಟಿಐ ಕಲುಗೋಟ್ಲ (ಆಂಧ್ರಪ್ರದೇಶ)
ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರಾವಧಿಯಲ್ಲಿ ಬಾತ್‌ರೂಮ್ ಸ್ವಚ್ಛಮಾಡುವ ರಾಸಾಯನಿಕಗಳನ್ನು ಬಳಸಿ ಸಿದ್ಧಪಡಿಸಿದ್ದ ತುಪ್ಪದಿಂದ ತಿರುಪತಿ ಲಡ್ಡು ತಯಾರಿಸಲಾಗುತ್ತಿತ್ತು ಎಂದು ಆಂಧ್ರ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ.ಕರ್ನೂಲ್ ಜಿಲ್ಲೆಯ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಶುಕ್ರವಾರ ಮಾತನಾಡಿದ ಅವರು, ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರ ತಿರುಪತಿ ವೆಂಕಟೇಶ್ವರ ಸ್ವಾಮಿಯ ಗೌರವಕ್ಕೆ ಚ್ಯುತಿ ತಂದಿದೆ. ತಿರುಪತಿ ಮಾತ್ರವಲ್ಲದೆ ಹಿಂದೂಗಳ ಮತ್ತೊಂದು ಪ್ರಮುಖ ಶ್ರದ್ಧಾಕೇಂದ್ರವಾದ ಶ್ರೀಶೈಲಂ ದೇಗುಲಕ್ಕೂ ಕಲಬೆರಕೆ ತುಪ್ಪ ಪೂರೈಕೆಯಾಗಿದೆ ಎಂದು ಆರೋಪಿಸಿದರು.
ಸುಮಾರು ಐದು ವರ್ಷಗಳ ಕಾಲ ಈ ರೀತಿ ಕಲಬೆರಕೆಯ ಹಾಗೂ ರಾಸಾಯನಿಕಯುಕ್ತ ತುಪ್ಪ ಬಳಸಿ ತಿರುಪತಿ ಲಡ್ಡು ತಯಾರಿಸಲಾಗಿದೆ ಎಂದು ನಾಯ್ಡು ಕಿಡಿಕಾರಿದರು.ಜಗನ್ ನಕಾರ:
‘ಕಲಬೆರಕೆ ತುಪ್ಪ ಪ್ರಕರಣದಲ್ಲಿ ನಮ್ಮ ಸರ್ಕಾರದ ಅವಧಿಯಲ್ಲಿ ಟಿಡಿಡಿ ಅಧ್ಯಕ್ಷರಾಗಿದ್ದ ವೈ.ವಿ. ಸುಬ್ಬಾರೆಡ್ಡಿ ಮತ್ತು ಬಿ. ಕರುಣಾಕರ ರೆಡ್ಡಿ ಅವರಿಗೆ ಸಿಬಿಐ ಕ್ಲೀನ್ ಚಿಟ್ ನೀಡಿದೆ. ವಿನಾಕಾರಣ ಚಂದ್ರಬಾಬು ಆರೋಪ ಮಾಡುತ್ತಿದ್ದಾರೆ’ ಎಂದು ಮಾಜಿ ಸಿಎಂ ಜಗನ್ಮೋಹನ ರೆಡ್ಡಿ ಹೇಳಿಕೊಂಡಿದ್ದಾರೆ.