ಸಾರಾಂಶ
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ರಾಜಕೀಯ ಹೇಳಿಕೆಗಳನ್ನು ನೀಡುವುದಕ್ಕೆ ತಿರುಮಲ ತಿರುಪತಿ ದೇವಸ್ಥಾನಮ್(ಟಿಟಿಡಿ) ನಿರ್ಬಂಧ ವಿಧಿಸಿದೆ.
ತಿರುಮಲ: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ರಾಜಕೀಯ ಹೇಳಿಕೆಗಳನ್ನು ನೀಡುವುದಕ್ಕೆ ತಿರುಮಲ ತಿರುಪತಿ ದೇವಸ್ಥಾನಮ್(ಟಿಟಿಡಿ) ನಿರ್ಬಂಧ ವಿಧಿಸಿದೆ. ಒಂದು ವೇಳೆ ತಿರುಮಲ ಆವರಣದಲ್ಲಿ ಈ ರೀತಿಯ ರಾಜಕೀಯ ಹೇಳಿಕೆಯನ್ನು ನೀಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಈ ಬಗ್ಗೆ ಟಿಟಿಡಿ ಹೇಳಿಕೆ ನೀಡಿದ್ದು, ‘ಯಾವಾಗಲೂ ಗೋವಿಂದ ನಾಮ ಸ್ಮರಣೆ ಮೊಳಗುವ ಪವಿತ್ರ ತಿರುಮಲ ದೈವಿಕ ದೇಗುಲದಲ್ಲಿ ಇತ್ತೀಚಿನ ದಿನಗಳಲ್ಲಿ ಕೆಲವು ವ್ಯಕ್ತಿಗಳು, ರಾಜಕೀಯ ಮುಖಂಡರು ದರ್ಶನ ಪಡೆದ ಬಳಿಕ ದೇವಸ್ಥಾನದ ಆವರಣದಲ್ಲಿಯೇ ರಾಜಕೀಯ ಮತ್ತು ದ್ವೇಷದ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದು ತಿರುಪತಿಯಲ್ಲಿ ಆಧ್ಯಾತ್ಮದ ವಾತಾವರಣವನ್ನು ಹಾಳು ಮಾಡುತ್ತಿದೆ. ಈ ರೀತಿ ಮಾಡುವವರ ವಿರುದ್ಧ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ’ ಎಂದಿದೆ.