ಸಾರಾಂಶ
ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ತಾವು ರಾಜೀನಾಮೆ ನೀಡುತ್ತಿರುವ ವಿಷಯ ಬಹಿರಂಗಪಡಿಸಿದ ಬಳಿಕ ಪ್ರಧಾನಿ ರೇಸ್‌ನಲ್ಲಿದ್ದಾರೆ ಎಂದು ಹೇಳಲಾಗಿದ್ದ ಭಾರತ ಮೂಲದ ಅನಿತಾ ಆನಂದ್, ಈಗ ರೇಸ್‌ನಿಂದ ಹಿಂದೆ ಸರಿಯುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಟೊರಾಂಟೋ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ತಾವು ರಾಜೀನಾಮೆ ನೀಡುತ್ತಿರುವ ವಿಷಯ ಬಹಿರಂಗಪಡಿಸಿದ ಬಳಿಕ ಪ್ರಧಾನಿ ರೇಸ್‌ನಲ್ಲಿದ್ದಾರೆ ಎಂದು ಹೇಳಲಾಗಿದ್ದ ಭಾರತ ಮೂಲದ ಅನಿತಾ ಆನಂದ್, ಈಗ ರೇಸ್‌ನಿಂದ ಹಿಂದೆ ಸರಿಯುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಜೊತೆಗೆ ಚುನಾವಣೆಯಲ್ಲಿಯೂ ಸ್ಪರ್ಧೆ ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ‘ನಾನು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಜತೆಗೆ ಪ್ರಧಾನಿ ಹುದ್ದೆಯ ಆಸಕ್ತಿಯೂ ಹೊಂದಿಲ್ಲ. ಪ್ರಾದ್ಯಾಪಕಿಯಾಗಿದ್ದ ನಾನು ಮತ್ತೆ ಪಾಠ ಮಾಡುವ ಕೆಲಸಕ್ಕೆ ಮರಳುತ್ತೇನೆ’ ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.