ಸಾರಾಂಶ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಶ್ರೀನಗರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇದು ಖಚಿತವಾದರೆ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆಯಾದಂತಾಗಲಿದೆ. ಪಿಡಿಪಿಯ ಸಂಸದೀಯ ಸಮಿತಿ ಶೀಘ್ರದಲ್ಲಿಯೇ ಸಭೆ ನಡೆಸಿದ ಜಮ್ಮು ಕಾಶ್ಮೀರದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ.
ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಈಗಾಗಲೇ ಸ್ವತಂತ್ರವಾಗಿ ಸ್ಪರ್ಧಿಸುವ ನಿರ್ಧಾರವನ್ನು ಕೈಗೊಂಡಿದೆ. ನಾವು ಈ ಕುರಿತಾಗಿ ಚರ್ಚೆ ನಡೆಸುತ್ತಿದ್ದೇವೆ. ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಪಕ್ಷದ ನಾಯಕ ಸುಶೀಲ್ ಬುಖಾರಿ ತಿಳಿಸಿದ್ದಾರೆ.
ಕಾಂಗ್ರೆಸ್‌ಗೆ ಶಾಕ್ ನೀಡಿದವರು: ಬಂಗಾಳದಲ್ಲಿ ಮಮತಾ, ಬಿಹಾರದಲ್ಲಿ ಜೆಡಿಯು, ಪಂಜಾಬ್‌ನಲ್ಲಿ ಆಪ್, ಮಹಾರಾಷ್ಟ್ರದಲ್ಲಿ ಶಿವಸೇನೆ ಉದ್ಧವ್ ಬಣ, ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಆರ್‌ಎಲ್‌ಡಿ.