ಸಾರಾಂಶ
ಬ್ರಾಹ್ಮಣರ ಮೇಲೆ ಮೂತ್ರ ಮಾಡುವೆ. ಏನಾದರು ತೊಂದರೆ ಇದೆಯೇ?’ ಎಂದು ಹೇಳಿಕೆ ನೀಡಿದ್ದ ನಿರ್ದೇಶಕ ಅನುರಾಗ್ ಕಶ್ಯಪ್ ಅವರಿಗೆ ಮೇ 7ಕ್ಕೆ ವಿಚಾರಣೆಗೆ ಬರುವಂತೆ ಸೂರತ್ ನ್ಯಾಯಾಲಯ ನೋಟಿಸ್ ನೀಡಿದೆ.
ಸೂರತ್: ‘ಬ್ರಾಹ್ಮಣರ ಮೇಲೆ ಮೂತ್ರ ಮಾಡುವೆ. ಏನಾದರು ತೊಂದರೆ ಇದೆಯೇ?’ ಎಂದು ಹೇಳಿಕೆ ನೀಡಿದ್ದ ನಿರ್ದೇಶಕ ಅನುರಾಗ್ ಕಶ್ಯಪ್ ಅವರಿಗೆ ಮೇ 7ಕ್ಕೆ ವಿಚಾರಣೆಗೆ ಬರುವಂತೆ ಸೂರತ್ ನ್ಯಾಯಾಲಯ ನೋಟಿಸ್ ನೀಡಿದೆ.
ಅನುರಾಗ್ ಹೇಳಿಕೆ ಬೆನ್ನಲ್ಲೇ ಕಮಲೇಶ್ ರಾವತ್ ಎಂಬುವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಪುರಸ್ಕರಿಸಿದ ಪೀಠ ಮೇ 7ಕ್ಕೆ ವಿಚಾರಣೆಗೆ ಹಾಜರಾಗುವಂತೆ ಅನುರಾಗ್ ಅವರಿಗೆ ನೋಟಿಸ್ ನೀಡಿದೆ. ಅನುರಾಗ್ ಕಶ್ಯಪ್ ಅವರು ಏ.16ರಂದು ತಮ್ಮ ಇನ್‌ಸ್ಟಾ ಪೋಸ್ಟ್‌ನ ಕಮೆಂಟ್‌ನಲ್ಲಿ ಪ್ರತಿಕ್ರಿಯಿಸಿರುವಾಗ ‘ನಾನು ಬ್ರಾಹ್ಮಣರ ಮೇಲೆ ಮೂತ್ರ ಮಾಡುವೆ’ ಎಂದಿದ್ದರು. ಈ ಹೇಳಿಕೆ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.
ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸೋನಿಯಾ, ರಾಗಾ ತಕ್ಷಣ ನೋಟಿಸ್‌ಗೆ ಕೋರ್ಟ್ ನಕಾರ
ನವದೆಹಲಿ: ನ್ಯಾಷನಲ್ ಹೆರಾಲ್ಡ್‌ಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಇತರರಿಗೆ ನೋಟಿಸ್ ನೀಡಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ.
ಪ್ರಕರಣದಲ್ಲಿ ಇಬ್ಬರ ವಿರುದ್ಧ ಸಲ್ಲಿಸಿರುವ ಆರೋಪಪಟ್ಟಿ ಹಿನ್ನೆಲೆಯಲ್ಲಿ ಇಬ್ಬರಿಗೂ ನೋಟಿಸ್ ಜಾರಿ ಮಾಡಬೇಕು ಎಂದು ಜಾರಿ ನಿರ್ದೇಶನಾಲಯ ಮನವಿ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್ ಆರೋಪಿಗಳ ಪ್ರತಿಕ್ರಿಯೆ ಪಡೆಯದೆಯೇ ಅವರಿಗೆ ನೋಟಿಸ್ ನೀಡಲು ಸಾಧ್ಯವಿಲ್ಲ. ಜೊತೆಗೆ ನೋಟಿಸ್‌ಗೆ ಪ್ರಕರಣ ಅರ್ಹ ಎಂದು ನ್ಯಾಯಾಲಯಕ್ಕೆ ಮನವರಿಕೆ ಆದರೆ ನಾವು ನೀಡುತ್ತೇವೆ ಎಂದು ಹೇಳಿ ಪ್ರಕರಣದ ವಿಚಾರಣೆಯನ್ನು ಮೇ 2ಕ್ಕೆ ಮುಂದೂಡಿದೆ.