ಕದನ ವಿರಾಮ ಉಲ್ಲಂಘಸಿದರೆ ಪಾಕ್‌ಗೆ ತಕ್ಕ ಉತ್ತರ ನೀಡುವ ಅಧಿಕಾರ ಕಮಾಂಡರ್‌ಗಳಿಗೆ

| N/A | Published : May 12 2025, 12:16 AM IST / Updated: May 12 2025, 04:39 AM IST

ಕದನ ವಿರಾಮ ಉಲ್ಲಂಘಸಿದರೆ ಪಾಕ್‌ಗೆ ತಕ್ಕ ಉತ್ತರ ನೀಡುವ ಅಧಿಕಾರ ಕಮಾಂಡರ್‌ಗಳಿಗೆ
Share this Article
  • FB
  • TW
  • Linkdin
  • Email

ಸಾರಾಂಶ

ಅಮೆರಿಕದ ಮಧ್ಯಸ್ಥಿಕೆಯಲ್ಲಿ ಏರ್ಪಟ್ಟಿದ್ದ ಕದನ ವಿರಾಮಕ್ಕೆ ಅನಿವಾರ್ಯವಾಗಿ ಒಪ್ಪಿದ್ದ ಪಾಕ್‌, ಕೆಲವೇ ಗಂಟೆಗಳಲ್ಲಿ ಅದನ್ನು ಉಲ್ಲಂಘಿಸಿದ ಬೆನ್ನಲ್ಲೇ, ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡುವ ಅಧಿಕಾರವನ್ನು ಸೇನಾ ಮುಖ್ಯಸ್ಥ ಜ. ಉಪೇಂದ್ರ ದ್ವಿವೇದಿ ಅವರು ಸೇನಾ ಕಮಾಂಡರ್‌ಗಳಿಗೆ ನೀಡಿದ್ದಾರೆ.

ನವದೆಹಲಿ: ಅಮೆರಿಕದ ಮಧ್ಯಸ್ಥಿಕೆಯಲ್ಲಿ ಏರ್ಪಟ್ಟಿದ್ದ ಕದನ ವಿರಾಮಕ್ಕೆ ಅನಿವಾರ್ಯವಾಗಿ ಒಪ್ಪಿದ್ದ ಪಾಕ್‌, ಕೆಲವೇ ಗಂಟೆಗಳಲ್ಲಿ ಅದನ್ನು ಉಲ್ಲಂಘಿಸಿದ ಬೆನ್ನಲ್ಲೇ, ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡುವ ಅಧಿಕಾರವನ್ನು ಸೇನಾ ಮುಖ್ಯಸ್ಥ ಜ. ಉಪೇಂದ್ರ ದ್ವಿವೇದಿ ಅವರು ಸೇನಾ ಕಮಾಂಡರ್‌ಗಳಿಗೆ ನೀಡಿದ್ದಾರೆ.

ಶನಿವಾರ ಸಂಜೆ, ಭೂಮಿ, ವಾಯು ಮತ್ತು ಸಮುದ್ರದದಿಂದ ನಡೆಯುವ ಎಲ್ಲಾ ಗುಂಡಿನ ದಾಳಿ ಮತ್ತು ಸೇನಾ ಕಾರ್ಯಾಚರಣೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸುವ ಒಪ್ಪಂದಕ್ಕೆ ಬಂದಿರುವುದಾಗಿ ಭಾರತ ಮತ್ತು ಪಾಕಿಸ್ತಾನ ಘೋಷಿಸಿದ್ದವು. ಆದರೆ ಈ ಘೋಷಣೆಯಾದ ಕೆಲ ಗಂಟೆಗಳಲ್ಲೇ ಪಾಕ್‌ ಪಡೆ ಗುಂಡು ಹಾರಿಸತೊಡಗಿದ್ದು, ಭಾರತೀಯ ಯೋಧರೂ ಅದಕ್ಕೆ ತಕ್ಕ ಉತ್ತರ ನೀಡಿದ್ದರು. ಇದಾದ ಬಳಿಕ ಪಶ್ಚಿಮ ಗಡಿಯಲ್ಲಿ ಕಮಾಂಡರ್‌ಗಳೊಂದಿಗೆ ಭದ್ರತಾ ಪರಿಸ್ಥಿತಿ ಪರಿಶೀಲಿಸಿದ ದ್ವಿವೇದಿ, ಪಾಕ್‌ ಪ್ರಚೋದನೆಗೆ ಸೂಕ್ತ ಉತ್ತರ ನೀಡುವ ಅಧಿಕಾರವನ್ನು ಕಮಾಂಡರ್‌ಗಳಿಗೆ ನೀಡಿದ್ದಾರೆ.

ಕೊಟ್ಟ ಕೆಲಸ ನಿಖರವಾಗಿ ಪೂರ್ಣ: ವಾಯುಪಡೆ

ನವದೆಹಲಿ: ಆಪರೇಷನ್ ಸಿಂದೂರ್ ಸಮಯದಲ್ಲಿ ತಮಗೆ ವಹಿಸಿದ್ದ ಕಾರ್ಯಗಳನ್ನು ನಿಖರವಾಗಿ ಮತ್ತು ರಾಷ್ಟ್ರೀಯ ಉದ್ದೇಶಗಳಿಗೆ ಅನುಗುಣವಾಗಿ ಯಶಸ್ವಿಯಾಗಿ ನಿರ್ವಹಿಸಿದ್ದೇವೆ ಎಂದು ಭಾರತೀಯ ವಾಯುಪಡೆ ತಿಳಿಸಿದೆ.

ಆಪರೇಷನ್ ಸಿಂದೂರ್ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ವಾಯುಪಡೆ, ‘ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ, ಸೂಕ್ತ ಸಮಯದಲ್ಲಿ ಇನ್ನಷ್ಟು ವಿವರಗಳನ್ನು ನೀಡಲಾಗುವುದು. ಊಹಾಪೋಹ ಅಥವಾ ಸುಳ್ಳು ಮಾಹಿತಿ ಪ್ರಸಾರದಿಂದ ದೂರವಿರಲು ಎಲ್ಲರನ್ನೂ ವಿನಂತಿಸುತ್ತೇವೆ. ಆಪರೇಷನ್ ಸಿಂಧೂರ್‌ನಲ್ಲಿ ನಿಯೋಜಿಸಲಾದ ಕಾರ್ಯಗಳನ್ನು ವಾಯುಪಡೆಯು ನಿಖರತೆ, ವೃತ್ತಿಪರತೆ ಮತ್ತು ರಾಷ್ಟ್ರೀಯ ಉದ್ದೇಶಗಳಿಗೆ ಅನುಗುಣವಾಗಿ ಯಶಸ್ವಿಯಾಗಿ ನಿರ್ವಹಿಸಿದೆ’ ಎಂದು ಹೇಳಿದೆ.