ಸಾರಾಂಶ
ಕಳೆದ 5 ವರ್ಷಗಳಲ್ಲಿ ದೇಶದ 5 ಸಶಸ್ತ್ರ ಪಡೆಗಳು ಮತ್ತು ಅಸ್ಸಾಂ ರೈಫಲ್ಸ್‌ನ 46930 ಸಿಬ್ಬಂದಿ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.
ನವದೆಹಲಿ: ಕಳೆದ 5 ವರ್ಷಗಳಲ್ಲಿ ದೇಶದ 5 ಸಶಸ್ತ್ರ ಪಡೆಗಳು ಮತ್ತು ಅಸ್ಸಾಂ ರೈಫಲ್ಸ್‌ನ 46930 ಸಿಬ್ಬಂದಿ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. ಈ ಕುರಿಉತ ಮಾಹಿತಿ ನೀಡಿರುವ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್, ‘ ಗಡಿ ಭದ್ರತಾ ಪಡೆ (ಬಿಎಸ್ಎಫ್)ನಲ್ಲಿ ಅತಿ ಹೆಚ್ಚು 21,860, ಕೇಂದ್ರ ಮೀಸಲು ಪೊಲೀಸ್ ಪಡೆಯಿಂದ (ಸಿಆರ್‌ಪಿಎಫ್) 12,893, ಅಸ್ಸಾಂ ರೈಫಲ್ಸ್‌ನಿಂದ 5,146, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಿಂದ (ಸಿಐಎಸ್‌ಎಫ್) 3,012, ಭಾರತ ಟಿಬೆಟ್ ಗಡಿ ಪೊಲೀಸರಿಂದ 2,281 ಹಾಗೂ ಸಶಸ್ತ್ರ ಸೀಮಾ ಬಲ್‌ನಿಂದ 1738 ಸಿಬ್ಬಂದಿಗಳು ಸ್ವಯಂ ನಿವೃತ್ತಿ ಪಡೆದಿದ್ದಾರೆ’ ಎಂದು ಮಾಹಿತಿ ನೀಡಿದರು.