ಬಿಜೆಪಿಯು ಆಪ್‌ ಶಾಸಕರನ್ನು ದುಡ್ಡು ಕೊಟ್ಟು ಖರೀದಿಸುತ್ತಿದೆ ಎಂದು ಆರೋಪ ಮಾಡಿದ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ದೆಹಲಿ ಪೊಲೀಸರು ನೋಟಿಸ್‌ ನೀಡಿದ್ದಾರೆ.

ನವದೆಹಲಿ: ತಲಾ 25 ಕೋಟಿ ರು. ಆಫರ್‌ ನೀಡುವ ಮೂಲಕ 7 ಆಪ್‌ ಶಾಸಕರನ್ನು ಬಿಜೆಪಿ ಖರೀದಿಸುತ್ತಿದೆ ಎಂದು ಆರೋಪ ಹೊರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ಗೆ ದಿಲ್ಲಿ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಶುಕ್ರವಾರ ರಾತ್ರಿ ಕೇಜ್ರಿವಾಲ್ ಮನೆಗೆ ಆಗಮಿಸಿದ್ದ ಪೊಲೀಸರು, ಅವರಿಗೆ ನೋಟಿಸ್‌ ಹಸ್ತಾಂತರಿಸಿದ್ದಾರೆ.

‘ಕೇಜ್ರಿವಾಲ್‌ ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದು ಬಿಜೆಪಿ ದೂರು ನೀಡಿತ್ತು.

ಈ ಸಂಬಂಧ ದೆಹಲಿಯಲ್ಲಿರುವ ಕೇಜ್ರಿವಾಲ್‌ಗೆ ನೋಟಿಸ್‌ ಜಾರಿಯಾಗಿದೆ.